ಆನೆ ದಂತ ಮಾರಾಟ ಮಾಡುತ್ತಿದ್ದವರ ಬಂಧನ
ಬೆಂಗಳೂರು, ಫೆ 11, ನಗರದಲ್ಲಿ ಆನೆ ದಂತ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ತಮಿಳು ನಾಡು ಮೂಲದ ಸೌಂಧರ್ ಪಾಂಡಿಯನ್ ಅಲಿಯಾಸ್ ಸೇಲ್ವಂ ಶಿವಾಜಿ (44 ), ಕಂದನ್ (40) ಬಂಧಿತ ಆರೋಪಿಗಳಾಗಿದ್ದು, ಅವರಿಂದ 2 ಆನೆ ದಂತಗಳನ್ನು ಆರ್.ಎಂ.ಸಿ.ಯಾರ್ಡ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣಾ ಸರಹದ್ದಿನ ಮಾರಪ್ಪನ ಪಾಳ್ಯ ಉಲ್ಲಾಸ್ ಚಿತ್ರಮಂದಿರದ ಮುಂಭಾಗದ ರಸ್ತೆಯಲ್ಲಿ ಇವರು ಗೋಣಿಚೀಲದೊಳಗೆ ಆನೆ ದಂತಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು
ಹೊಂಚುಹಾಕುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೇಮನಾಥ್ ಎಂಬುವರು ತಮಗೆ ಮಾರಾಟ ಮಾಡಲು ಆನೆ ದಂತಗಳನ್ನು ತಂದು ಕೊಡುತ್ತಿರುವುದಾಗಿ ಅರೋಪಿಗಳು ವಿಚಾರಣೆ ವೇಳೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಸದ್ಯ, ಪ್ರೇಮ್ ನಾಥ್ ಎಂಬುವವರು ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆ ಗಾಗಿ ಬಲೆ ಬೀಸಿದ್ದಾರೆ.ಯಶವಂತಪುರ ಉಪ ವಿಭಾಗದ ಎಸಿಪಿ ಎನ್.ಟಿ. ಶ್ರೀನಿವಾಸ ರೆಡ್ಡಿ ಮಾರ್ಗದರ್ಶನದಲ್ಲಿ ಆರ್.ಎಂ. ಸಿ ಆರ್ ಯಾರ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಹೆಚ್. ಮಹೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 