ಅಂಬಿಗರ ಚೌಡಯ್ಯನವರ ಜೀವನದ ತತ್ವಾದರ್ಶವನ್ನು ಅಳವಡಿಸಿಕೊಳ್ಳಿ: ಭಜಂತ್ರಿ

ಬೆಳಗಾವಿ: 21 :ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾನತೆ ಹಾಗೂ ಸಹೋದರತೆಯನ್ನು ಸಾರುವ ಕೆಲಸವನ್ನು ಮಾಡಿದವರು. ನೇರ ನುಡಿಯ ವಚನಕಾರ ಅಂಬಿಗರ ಚೌಡಯ್ಯ ಕೇವಲ ಒಂದು ಜಾತಿ ಸಮುದಾಯ ಅಥವಾ ಕುಲಕ್ಕೆ ಸೀಮಿತವಾದವರಲ್ಲ ಅವರ ವಚನಗಳಲ್ಲಿ ಬದುಕಿನ ಸೂತ್ರಗಳಿವೆ ಅವುಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಎಮ್.ವಾಯ್.ಭಜಂತ್ರಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರಗಂಧರ್ವ ಕಲಾಮಂದಿರದಲ್ಲಿ ಮಂಗಳವಾರ (ಜ.21) ಏರ್ಪಡಿಸಿದ್ದ ``ನಿಜಶರಣ ಅಂಬಿಗರ ಚೌಡಯ್ಯ' ಜಯಂತಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬುದ್ದ, ಬಸವಣ್ಣ, ಡಾ.ಅಂಬೇಡ್ಕರ್ ನಡೆದ ದಾರಿಯಲ್ಲಿ ನಾವು ನಡಿಯೋಣ ಎಂದು ಹೇಳಿದರು. 12ನೇ ಶತಮಾನದಲ್ಲಿ ನಡೆದ ಸಾಮಾಜಿಕ ಕ್ರಾಂತಿಯು ಜಾತಿ ತಾರತಮ್ಯದ ವಿರುದ್ಧ ಧ್ವನಿಯಾಗಿತ್ತು ಹಾಗೂ ಜಾತಿಯನ್ನು ಸ್ಪಷ್ಟವಾಗಿ ವಿರೋಧಿಸಿದವರು ಚೌಡಯ್ಯನವರು ಎಂದು ಹೇಳಿದರು.

ಚೌಡಯ್ಯನವರ ಜೀವನದ ತತ್ವಾದರ್ಶವನ್ನು ಹಾಗೂ ವಚನ ಸಾಹಿತ್ಯವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಕನ್ನಡದ ಮೊಟ್ಟಮೊದಲ ಬಂಡಾಯ ಕವಿ ಅಂಬಿಗರ ಚೌಡಯ್ಯನವರು ಎಂದು ಹೇಳಿದರು.ತಮ್ಮ ವಚನಗಳ ಮೂಲಕ ಜನಸಾಮಾನ್ಯರಲ್ಲಿನ ಮೂಡನಂಬಿಕೆಗಳನ್ನು ಹಾಗೂ  ಅರ್ಥವಿಲ್ಲದ ಆಚರಣೆಗಳನ್ನು ಹೋಗಲಾಡಿಸಲು ಶ್ರಮಿಸಿದವರು ಅಂಬಿಗರ ಚೌಡಯ್ಯನವರು  ಎಂದು ಹೇಳಿದರು.

ಅಂಬಿಗರ ಚೌಡಯ್ಯ ಕೇವಲ ಶರಣ ಮಾತ್ರವಲ್ಲ ಅನೇಕ ಪವಾಡಗಳನ್ನು ಮಾಡಿದವರು ಎಂದು ಹೇಳಿದರು.ಅಂಬಿಗಸ್ಥ ಸಮಾಜ ಅದೊಂದು ನಂಬಿಗಸ್ಥ ಸಮಾಜ ಹಾಗೂ ಚೌಡಯ್ಯನವರು ವಿಶಿಷ್ಟವಾದ ವ್ಯಕ್ತಿತ್ವವನ್ನು ಹೊಂದಿದವರು ಎಂದು ಡಾ.ಎಮ್.ವಾಯ್.ಭಜಂತ್ರಿ ಅಭಿಪ್ರಾಯಪಟ್ಟರು.

ಸಮಾಜದ ಮುಖಂಡ ಬಸವರಾಜ ಸುಣಗಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶರಣರ ವಿಚಾರಗಳು ನಾಡಿನ ತುಂಬಾ ಪ್ರಚಾರವಾಗುತ್ತಿದೆ ಇದೊಂದು ಸಂತಸದ ಸಂಗತಿ ಎಂದು ಹೇಳಿದರು.

ಪ್ರಾರಂಭದಲ್ಲಿ ಬಡಿಗೇರ ಹಾಗೂ ತಂಡದವರಿಂದ ವಚನ ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೇರವೆರಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕರಾದ ವಿದ್ಯಾವತಿ ಭಜಂತ್ರಿ, ಬಿ.ಸುರೇಖಾ, ಯಲ್ಲಪ್ಪ ಹುದಲಿ, ಜಿ.ಜಿ.ತಳವಾರ, ಎಸ್.ಕೆ.ಗಸ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಜಶ್ರೀ ನಿರೂಪಿಸಿ ವಂದಿಸಿದರು ಹಾಗೂ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು.

ಭಾವಚಿತ್ರದ ಭವ್ಯ ಮೆರವಣಿಗೆ: ಇದಕ್ಕೂ ಮುಂಚೆ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವರ  ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

ಶಾಸಕ ಅನಿಲ್ ಬೆನಕೆ ಅವರು, ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಕಿತ್ತೂರು ಚೆನ್ನಮ್ಮ ವೃತ್ತ, ಜಿಲ್ಲಾ ಆಸ್ಪತ್ರೆ ರಸ್ತೆ, ಅಂಬೇಡ್ಕರ್ ರಸ್ತೆ ಮಾರ್ಗವಾಗಿ ಕುಮಾರ್ ಗಂಧರ್ವ ರಂಗಮಂದಿರ ತಲುಪಿತು