ಕರೊನಾ ವೈರಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ

ಬೆಳಗಾವಿ 6:  ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿರುವ ಕರೋನಾ ವೈರಸ್ ನಿಯಂತ್ರಣಕ್ಕೆ ಹಾಗೂ ಸೋಂಕಿತರು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸಕರ್ಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಜನರು ಭಯಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸಮೀಕ್ಷಾ ಘಟಕದ ವತಿಯಿಂದ ಶುಕ್ರವಾರ ಡಿಸಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಕರೊನಾ ವೈರಸ್ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ವರದಿಗಳು ಬರುತ್ತಿವೆ. ಸಾಮಾಜಿಕ ಜಾಲತಾಣಗಳು ಮತ್ತು ಕೆಲ ಮಾಧ್ಯಮಗಳಲ್ಲಿನ ತಪ್ಪು ಮಾಹಿತಿಗಳಿಂದ  ಜನರ ಆತಂಕ ಹೆಚ್ಚಾಗಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸೇರಿ ಎಲ್ಲ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರತ್ಯೇಕ ವಾಡರ್್ ಸ್ಥಾಪನೆ: ಸೋಂಕಿತರಿಗೆ ತುತರ್ು ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದು, ತಾಲೂಕಾ ಆಸ್ಪತ್ರೆಗಳಲ್ಲೂ ಪ್ರತ್ಯೇಕ ವಾಡರ್್ ಸ್ಥಾಪಿಸಬೇಕು. ಅಗತ್ಯ ಔಷಧಿಗಳ ಸಂಗ್ರಹ ಮಾಡಿಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.

ಕರೊನಾ ವೈರಸ್ ತಡೆಗಟ್ಟಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಅದನ್ನು ತಕ್ಷಣವೇ ಕೈಗೊಳ್ಳಬೇಕು. ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ ಜನರಲ್ಲಿನ ಆತಂಕ ದೂರ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು.ಮುಂಜಾಗ್ರತವಾಗಿ ಐಸೊಲೇಷನ್ ವಾರ್ಡಗೆ ಬೇಕಾಗುವ ಎಲ್ಲ ತಯಾರಿ ಮಾಡಿಕೊಳ್ಳಬೇಕು. ಮಾಧ್ಯಮಗಳ ಪ್ರತಿನಿಧಿಗಳು ಮಾಹಿತಿ ಕೇಳಿದರೆ ತಕ್ಷಣವೇ ಸೂಕ್ತ ಮಾಹಿತಿ ಒದಗಿಸಬೇಕೆಂದರು.

ಗ್ರಾಮಿಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲು ತಾಪಂ, ಗ್ರಾಪಂಗಳಲ್ಲಿ ಸಮಿತಿ ರಚನೆ ಮಾಡಬೇಕು ಎಂದು ಸೂಚನೆ ನೀಡಿದರು. 

ಅಧಿಕ ಬೆಲೆಗೆ ಮಾಸ್ಕ್ ಮಾರಾಟ ಮಾಡಿದರೆ ಲೈಸೆನ್ಸ್ ರದ್ದು: ಕರೋನಾ ವೈರಸ್ ಹರಡುವ ಭೀತಿಯಿಂದ ಹೆಚ್ಚಿನ ಸಂಖ್ಯೆಯ ಜನರು ಮಾಸ್ಕ್ ಖರೀದಿಸುತ್ತಿದ್ದಾರೆ. ಪರಿಸ್ಥಿತಿ ದುರ್ಬಳಕೆ ಮಾಡಿಕೊಂಡು ಔಷಧ ಅಂಗಡಿಗಳು ಅಥವಾ ಔಷಧ ಮಳಿಗೆಗಳು ಎಂ.ಆರ್.ಪಿ. ದರಕ್ಕಿಂತ ಹೆಚ್ಚಿನ ಹಣ ಪಡೆದರೆ  ಅಂತಹ ಅಂಗಡಿಗಳ ಲೈಸೆನ್ಸ್ ರದ್ದು ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಮಾಸ್ಕಗಳನ್ನು ರಸ್ತೆಬದಿ ಮಾರಾಟ ಮಾಡುವುದು ಕಂಡುಬಂದರೆ  ಡ್ರಗ್ಸ್ ಕಂಟ್ರೋಲರ್  ಮತ್ತು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದರು. ಬೆಳಗಾವಿಯಲ್ಲಿ 9 ಜನರಿಗೆ ಕರೊನಾ ವೈರಸ್ ತಗುಲಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜನರಲ್ಲಿರುವ ಆತಂಕ ದೂರ ಮಾಡಲು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ತಾಪಂಗಳಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸವರ್ೇಕ್ಷಣಾ ಅಧಿಕಾರಿಗಳಿಗೆ ಸೂಚಿಸಿದರು.

ಜಾತ್ರೆ, ಹೋಳಿ ಮುನ್ನೆಚ್ಚರಿಕೆಗೆ ಸಲಹೆ: ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳು ಮತ್ತು ಹೋಳಿ ಹಬ್ಬದ ಸಂದರ್ಭಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಸೋಂಕು ತಗುಲದಂತೆ ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾತ್ರೆಗೆ ಬರುವ ಭಕ್ತಾಧಿಗಳು ಪರಸ್ಪರ ದೂರದಿಂದಲೇ ಸಂವಹನ ನಡೆಸಬೇಕು.  ಹೋಳಿ ಹಬ್ಬದ ಹಿನ್ನಲೆ ರಾಸಾಯನಿಕ ಬಣ್ಣಗಳ ಬದಲಿಗೆ ಜೈವಿಕ ಬಣ್ಣಗಳನ್ನು ಉಪಯೋಗಿಸುವಂತೆ ಜನರಿಗೆ ತಿಳಿಸಬೇಕು ಎಂದು ಹೇಳಿದರು.

ತಾಲೂಕಾ ಆಸ್ಪತ್ರೆಗಳಲ್ಲಿ ಕರೊನಾ ಪ್ರಕರಣಗಳು ಕಂಡು ಬಂದರೆ ವೈದ್ಯರು ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ತಿಳಿಸಬೇಕು. ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಕರೊನಾ ವೈರಸ್ ಕುರಿತಾದ ಮಾಹಿತಿ ನೀಡಬೇಕು ಎಂದು   ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. 

ಜಿಲ್ಲಾ ಸವರ್ೇಕ್ಷಣಾ ಅಧಿಕಾರಿ ಡಾ. ಬಿ.ಎನ್ ತುಕ್ಕಾರ ಅವರು ಮಾತನಾಡಿ, ಕನರ್ಾಟಕದಲ್ಲಿ ಇಲ್ಲಿಯವರೆಗೆ ಯಾವದೇ ಕರೊನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ. ಪ್ರಕರಣಗಳುನ್ನು ಪತ್ತೆ ಹಚ್ಚಲು ಸೋಂಕಿತರ ರಕ್ತದ ಮಾದರಿಗಳನ್ನು ಪುಣೆ ಮತ್ತು ಬೆಂಗಳೂರಿನ ಪ್ರಯೋಗಾಲಯಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ಇದುವರೆಗೆ ಕರೊನಾ ಸೋಂಕಿಗೆ ಚಿಕಿತ್ಸೆ ಕಂಡುಹಿಡಿಯಲು ಆಗಿಲ್ಲ; ಹಾಗಾಗಿ ರೋಗದ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು. 

ಕರೊನಾ ಸೋಂಕು ಹರಡುವ ರೀತಿ: ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ಎದೆನೋವು, ತೀವ್ರ ಎದೆಬಡಿತ, ಕಿಡ್ನಿ ವೈಫಲ್ಯ, ತಲೆನೊವು, ಗಂಟಲು ನೋವು, ಹಾಗೂ ಭೇದಿ ಇವು ಕರೋನಾ ಸೋಂಕಿನ ಲಕ್ಷಣಗಳಾಗಿವೆ.

ಸಾಮಾನ್ಯ  ಫ್ಲೂ  ಹರಡುವ ರೀತಿಯಲ್ಲಿಯೇ  ಕರೋನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ ಸೀನಿದಾಗ ಈ ವೈರಸ್ಗಳು ಹರಡುತ್ತವೆ. ವೈಯಕ್ತಿಕ ಸ್ವಚ್ಛತೆ ಇಲ್ಲದೇ ಮೂಗು, ಬಾಯಿ ಪದೇ ಪದೆ ಮುಟ್ಟಿಕೊಳ್ಳುವುದರಿಂದ ಸೋಂಕು ಹರಡುವ ಸಾಧ್ಯತೆಗಳಿರುತ್ತವೆ.

ಮುಂಜಾಗೃತ ಕ್ರಮಗಳು: ಕೆಮ್ಮುವಾಗ ಸೀನುವಾಗ ಕೈವಸ್ತ್ರ ಉಪಯೋಗಿಸಬೇಕು, ಸೋಂಕು ಪಿಡಿತರಿಂದ ದೂರವಿರಬೇಕು, ಮಾಂಸ, ಮೊಟ್ಟೆ  ಚೆನ್ನಾಗಿ ಬೇಯಿಸಿ ತಿನ್ನಬೇಕು, ಸುರಕ್ಷಿತವಲ್ಲದ ಪ್ರಾಣಿಗಳನ್ನು ಮುಟ್ಟಬಾರದು ಹಾಗೂ ಟ್ರಿಪಲ್ ಲೇಯರ್ ಮಾಸ್ಕ  ಬಳಸುಬೇಕು ಎಂದು ಜಿಲ್ಲಾ ಸವರ್ೇಕ್ಷಣಾ ಅಧಿಕಾರಿ ಡಾ. ಬಿ.ಎನ್ ತುಕ್ಕಾರ ತಿಳಿಸಿದರು.

  ಜಿಪಂ ಸಿಇಓ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಅಂತರಾಷ್ಟ್ರಿಯ ವಿಮಾನ ನಿಲ್ದಾಣಗಳಲ್ಲಿ ಕರೊನಾ ವೈರಸ್ ಹರಡುವದನ್ನು ತಡೆಯಲು ತೀವ್ರ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಆದರೆ ಕನೆಕ್ಟಿಂಗ್ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಬಗ್ಗೆ ನಿಗಾ ವಹಿಸುವ ಅವಶ್ಯಕವಾಗಿದೆ ಎಂದು ತಿಳಿಸಿದರು. 

ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಡು ಕಾಖರ್ಾನೆಗಳು ಹಾಗೂ ಕಂಪನಿಗಳು ಇರುವುದರಿಂದ ಆ ಪ್ರದೇಶದಲ್ಲಿ ಇರುವ ವಿದೇಶಿಗರ ಬಗ್ಗೆ ಮಾಹಿತಿ ಕಲೆ ಹಾಕಿ. ಅಕ್ಕಪಕ್ಕದ ರಾಜ್ಯಗಳಿಂದ ವಿದೇಶಿಗರು ಬಂದು, ಹೋಟಲ್ ಗಳಲ್ಲಿ ವಾಸವಾಗಿದ್ದಾರಾ ಎಂಬುದನ್ನು ಹೋಟೆಲ್ ಮಾಲೀಕರಿಗೆ ಸಂಪರ್ಕ ಮಾಡಿ ಮಾಹಿತಿ ಪಡೆಯಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

  ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ವಿ.ಮುನ್ಯಾಳ, ಬಿಮ್ಸ್ ನಿದರ್ೇಶಕ ಡಾ. ವಿನಯ ದಾಸ್ತಿಕೊಪ್ಪ ಸೇರಿದಂತೆ ಶಿಕ್ಷಣ, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.