ಯಳ್ಳೂರ ರಸ್ತೆಯಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ದಲ್ಲಿ ತುರ್ತು ವೈದ್ಯಕೀಯ ದಿನ ಆಚರಣೆ
Emergency Medicine Day celebrated at KLE Centenary Charitable Hospital and Medical Research Centre o
ಲೋಕದರ್ಶನ ವರದಿ
ಬೆಳಗಾವಿ 28 : ಕಾರ್ಯಕ್ರಮವನ್ನು ಉದ್ದೆಶಿಸಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಎನ್ ಅವರು ತುರ್ತು ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸುವುದು ಹಾಗೂ ಮುಂಚೂಣಿ ಸಿಬ್ಬಂದಿಗೆ ಅಗತ್ಯ ಬೆಂಬಲ ನೀಡುವ ಮಹತ್ವದ ಕುರಿತು ಮತ್ತು ತುರ್ತು ಚಿಕಿತ್ಸಾ ಸೇವೆಯಲ್ಲಿ ಮುಂಚೂಣಿಯಲ್ಲಿ ನಿಂತಿರುವ ಆರೋಗ್ಯ ಕಾರ್ಯಕರ್ತರಿಗೆ ಸುರಕ್ಷಿತ, ಬೆಂಬಲಾತ್ಮಕ ಹಾಗೂ ಪ್ರೋತ್ಸಾಹಕಾರಿ ವಾತಾವರಣವನ್ನು ನಿರ್ಮಿಸಲು ನಾವು ಎಲ್ಲರೂ ಕೈಜೋಡಿಸೋಣ ಎಂದು ಮಾತನಾಡಿದರು.
ವೈದ್ಯಕೀಯ ಅಧೀಕ್ಷಕರಾದ ಡಾ. ಸಂಜಯ ಕಂಬಾರ ಅವರು ತುರ್ತು ವೈದ್ಯಕೀಯ ವಿಭಾಗವು ಆಸ್ಪತ್ರೆಯ ಹೃದಯ ಹಾಗೂ ಪ್ರಮುಖ ಆಧಾರಸ್ತಂಭವಾಗಿದೆ ಎಂದು ಹೇಳಿದರು. ಅಪಘಾತಗಳು, ಹೃದಯಾಘಾತ, ಸ್ಟ್ರೋಕ್, ವಿಷಸೇವನೆ, ಗಂಭೀರ ಗಾಯಗಳು ಹಾಗೂ ಇತರ ಜೀವಾಪಾಯದ ಪರಿಸ್ಥಿತಿಗಳಲ್ಲಿ ರೋಗಿಯ ಜೀವ ಉಳಿಸುವ ಮೊದಲ ಜವಾಬ್ದಾರಿ ತುರ್ತು ವೈದ್ಯಕೀಯ ತಂಡದ ಮೇಲಿದೆ. ಅವರ ತ್ವರಿತ ನಿರ್ಧಾರ, ಪರಿಣತಿ ಹಾಗೂ ಮಾನವೀಯ ಸೇವೆ ಪ್ರತಿದಿನ ಅನೇಕ ಜೀವಗಳನ್ನು ಉಳಿಸುತ್ತಿದೆ ಎಂದು ತಿಳಿಸಿದರು.
ತುರ್ತು ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ರಿಕ್ಕಿ ಪಾಟೀಲ ತುರ್ತು ವೈದ್ಯಕೀಯ ವಿಭಾಗವನ್ನು ಆಸ್ಪತ್ರೆಯ ಹೃದಯಭಾಗ ಎಂದು ಕರೆಯಲಾಗುತ್ತದೆ. ಇದು ಎಂದಿಗೂ ನಿದ್ರೆ ಮಾಡದ ವಿಭಾಗವಾಗಿದ್ದು, ಜೀವಾಪಾಯದ ಕ್ಷಣಗಳಲ್ಲಿ ವೈದ್ಯರು, ನರ್ಸ್‌ಗಳು, ಪ್ಯಾರಾಮೆಡಿಕಲ್ ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿ ಜೀವಗಳನ್ನು ಉಳಿಸಲು ಹಗಲು-ರಾತ್ರಿ ಶ್ರಮಿಸುತ್ತಿರುತ್ತಾರೆ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 