ಬಾಗಲಕೋಟೆ: ಪ್ರಕೃತಿ ವಿಕೋಪದಿಂದ ಜಿಲ್ಲೆಯ ಜನತೆ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಸಂತ್ರಸ್ಥರಾಗಿದ್ದು, ಅವರಿಗೆ ತುತರ್ು ಪರಿಹಾರ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು 73ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಜಿಲ್ಲೆಯ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿಮರ್ಿಸಿಕೊಡಲಾಗುತ್ತಿದೆ. ಅಲ್ಲದೇ ಮನೆಗಳನ್ನು ಕಟ್ಟಿಕೊಡಲಾಗುತ್ತದೆ. ಪ್ರವಾಹದಿಂದ ಮಣ್ಣಿನ ಮನೆಗಳು ಕುಸಿಯುವ ಸಂಭವವಿದ್ದು, ಸಂತ್ರಸ್ತರು ಮನೆಗೆ ಮರಳಿ ತೆರೆಳದಂತೆ ತಿಳಿಸಲಾಗಿದೆ. 2-3 ದಿನಗಳಲ್ಲಿ ಸಂತ್ರಸ್ಥರ ಖಾತೆ 10 ಸಾವಿರ ರೂ.ಗಳನ್ನು ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರವಾಹ ಇಳಿಮುಖವಾಗುತ್ತಿದ್ದು, ನೀರು ಇಳಿದ ಮೇಲೆ ಮನೆ ಹಾನಿ ಹಾಗೂ ಬೆಳೆ ಹಾನಿ, ರಸ್ತೆ ಸೇತುವೆಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಓಗಳು ತಾ.ಪಂ ಇಓಗಳು ಹಾಗೂ ತಹಶೀಲ್ದಾರರು ಸೇರಿ ಜಂಟಿಯಾಗಿ ಸಮೀಕ್ಷೆ ಕಾರ್ಯ ನಡೆಯಲಿದೆ ಎಂದರು. ಜಿಲ್ಲೆಯಲ್ಲಿ ಕಳೆದ 2009-10ರಲ್ಲಿ ನೆರೆಯಿಂದ ಸಂತ್ರಸ್ತರಾದವರಿಗೆ ಆಸರೆ ಮೆನೆಗಳನ್ನು ಕಟ್ಟಿಕೊಡಲಾಗಿದ್ದು, ಇನ್ನು ಕೆಲವೊಂದು ಹಕ್ಕು ಪತ್ರ ನೀಡುವಲ್ಲಿ ವಿಳಂಬವಾಗಿದ್ದು, ಆರ್ & ಆರ್ ಜೊತೆ ಚಚರ್ಿಸಿ ಹಂತ ಹಂತವಾಗಿ ತಾರತಮ್ಯವಿಲ್ಲದೇ ಪರಿಹಾರ ನೀಡುವುದಾಗಿ ತಿಳಿಸಿದರು. ಸಂತ್ರಸ್ತರಿಗೆ ದಾನ ನೀಡುವವರು ಮುಖ್ಯಮಂತ್ರಿಗಳ ಖಾತೆಗೆ ಮಾತ್ರ ಜಮೆ ಮಾಡಬೇಕು. ಸಂಘ-ಸಂಸ್ಥೆಗಳು ದೇಣಿಗೆ ಸಂಗ್ರಹಿಸಬೇಕಾದಲ್ಲಿ ಜಿಲ್ಲಾಡಳಿತದಿಂದ ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ಇತರೆ ಯಾವುದೇ ರೀತಿಯ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಬಾರದು. ಈಗಾಗಲೇ ವಾಟ್ಸ್ಅಪ್, ಟ್ವಿಟ್ಟರ ಹಾಗೂ ಫೇಸ್ ಬುಕ್ಗಳಲ್ಲಿ ವಿವಿಧ ಬ್ಯಾಂಕ್ ಖಾತೆಗಳನ್ನು ನೀಡುತ್ತಿರುವವರ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳ ಪರಿಹಾರ ಖಾತೆ ಹೊರತಾಗಿ ಯಾವುದೇ ಪರಿಹಾರ ಖಾತೆಗಳಿಗೆ ಜಮಾ ಮಾಡದಿರುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿಗಳಾದ ಗರಿಮಾ ಪನ್ವಾರ, ಗಿರೀಶ, ಅಪರ ಜಿಲ್ಲಾಧಿಕಾರಿ ದುಗರ್ೇಶ ರುದ್ರಾಕ್ಷಿ ಸೇರಿದಂತೆ ಇತರರು ಇದ್ದರು.