ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು: ಶಾಸಕ ರಾಜುಗೌಡ

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು: ಶಾಸಕ ರಾಜುಗೌಡ Emphasis on development of rural roads: MLA Rajugowda

            ದೇವರಹಿಪ್ಪರಗಿ 02: ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ರಸ್ತೆಗಳು, ಹಂತ ಹಂತವಾಗಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು. ತಾಲೂಕಿನ ಜಾಲವಾದ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್‌-ಇ 5054 ಯೋಜನೆಯಡಿ ಸುಮಾರು 300 ಲಕ್ಷ ರೂ. ವೆಚ್ಚದ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು.‘ಕ್ಷೇತ್ರದಲ್ಲಿ ಸಾರ್ವಜನಿಕರ ಅವಶ್ಯಕತೆಗೆ ಅನುಗುಣವಾಗಿ ಪ್ರತಿ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸಂಚಾರಕ್ಕೆ ಯೋಗ್ಯವಲ್ಲ ರಸ್ತೆಗಳ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹಂತ ಹಂತವಾಗಿ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು.

              ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರಕಾರಕ್ಕೆ ಒತ್ತಡ ತಂದಿದ್ದು ಈಗ ಕೋಟ್ಯಾಂತರ ರೂ.ವೆಚ್ಚದಲ್ಲಿ ಮತಕ್ಷೇತ್ರದ ಬಹುತೇಕ ಗ್ರಾಮಗಳ ರಸ್ತೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರಿಟ್ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳ ಅಭಿವೃದ್ಧಿ ಪಡಿಸುವುದರಿಂದ ಗ್ರಾಮಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಒಮ್ಮೆ ಮಾಡಿದ ಕೆಲಸಗಳು ಶಾಶ್ವತವಾಗಿ ಉಳಿಯಬೇಕು. ಆಗ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಗೌರವ ಸಿಗುತ್ತದೆ’ಆದಕಾರಣ ಸಾರ್ವಜನಿಕರು ರಸ್ತೆ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದು ಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಜನರು ಪಕ್ಷಬೇಧ ಮರೆತು ಸಮಸ್ಯೆಗಳನ್ನು ನನ್ನ ಗಮನಕ್ಕೆ ತರಬೇಕು. ಅವುಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಿ ಕೊಡುತ್ತೇನೆ ಎಂದರು. ಸಿಂದಗಿ ಪಿಡಬ್ಲ್ಯೂಡಿ ಎಇಇ ಅರುಣಕುಮಾರ ವಡಿಗೇರಿ ಅವರು ರಸ್ತೆಯ ಕುರಿತು ಮಾಹಿತಿ ನೀಡಿದರು. 

           ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಭೀಮರಾಯ ಹಂಗನಳ್ಳಿ, ರಾಮನಗೌಡ ಪಾಟೀಲ, ಶ್ರೀಶೈಲ ಗೋಲಗೇರಿ,ಮಾಳು ಚಿತ್ತಾಪುರ,ಖಾದಿರ್ ಬೆಕಿನಾಳ, ರಾಮಣ್ಣ ನಾಯ್ಕೋಡಿ, ಡಿ.ಕೆ.ರಾಠೋಡ, ದಸ್ತಗೀರಸಾಬ ಇನಾಮದಾರ,ಎಂ.ಕೆ. ಸಜ್ಜನ್ ರಾವುಸಾಬ್ ಮೋಮೀನ, ತಿಪ್ಪಣ್ಣ ಕನ್ನೊಳ್ಳಿ,ಅಪ್ಪುಗೌಡ ಪಾಟೀಲ, ಪಿಡಿಒ ಬಿ.ಎಚ್‌. ಗಾವಡೆ, ಇಲಾಖೆ ಅಧಿಕಾರಿಗಳಾದ ಸುಭಾಸ ಸಜ್ಜನ, ಗುತ್ತಿಗೆದಾರರಾದ ಅಶೋಕ.ಎಸ್‌.ಪಾಟೀಲ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.