ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು: ಶಾಸಕ ರಾಜುಗೌಡ.
Emphasis on development of rural roads: MLA Rajugowda.
ದೇವರಹಿಪ್ಪರಗಿ 09: ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ಕೆಲ ಗ್ರಾಮಗಳ ರಸ್ತೆಗಳು ಇನ್ನೂ ಸಹ ದುಸ್ಥಿತಿಯಲ್ಲಿದ್ದು, ಹಂತ ಹಂತವಾಗಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಮತಕ್ಷೇತ್ರದ ಕಲಕೇರಿ ಗ್ರಾಮದಲ್ಲಿ ಮಂಗಳವಾರದಂದು ಲೋಕೋಪಯೋಗಿ ಇಲಾಖೆ ಉಪ ವಿಭಾಗ ಸಿಂದಗಿ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ 3054 ರಸ್ತೆ ಸುಧಾರಣೆ ಯೋಜನೆಯಡಿಯಲ್ಲಿ ಕ್ಷೇತ್ರದ ತಿಳಗೂಳ ಕ್ರಾಸ್, ಕಲಕೇರಿ ಅಸ್ಕಿ ರಸ್ತೆ ಕಿಮೀ 2.04 ರಿಂದ 3.10ರ ವರೆಗೆ ರಸ್ತೆ ಅಭಿವೃದ್ಧಿಪಡಿಸುವ ಸುಮಾರು 300ಲಕ್ಷ ರೂ, ವೆಚ್ಚದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ, ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು,ಸಾರ್ವಜನಿಕರಿಗೆ ಉತ್ತಮ ರಸ್ತೆ ವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆ, ಸಾರಿಗೆ, ವಿದ್ಯುತ್, ಶಿಕ್ಷಣ ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಜನರಿಗೆ ಮೂಲ ಸೌಕರ‌್ಯ ಒದಗಿಸಿ ಕೊಡಲು ಹಾಗೂ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಡ ತಂದಿದ್ದೇನೆ. ಈಗ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಈ ರಸ್ತೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರಿಟ್ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಮತ್ತಷ್ಟು ಶ್ರಮಿಸಲಾಗುವುದು. ನನ್ನ ಅಧಿಕಾರದ ಅವಧಿಯಲ್ಲಿ ಗುಣಮಟ್ಟದ ವಿಚಾರದಲ್ಲಿ ರಾಜಿ ಇಲ್ಲ ಆದ್ದರಿಂದ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಸಂದರ್ಭದಲ್ಲಿ ಸ್ಥಳೀಯ ಹಿರೇಮಠದ ಷ.ಬ್ರ ಶ್ರೀ ಸಿದ್ಧರಾಮ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.ಇದೇ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ರಾಜಅಹ್ಮದ್ ಸಿರಸಗಿ, ಲೋಕೋಪಯೋಗಿ ಇಲಾಖೆಯ ಎಇಇ ಅರುಣಕುಮಾರ ವಡಿಗೇರಿ, ಮುಖಂಡರುಗಳಾದ ವಿಶ್ವನಾಥ ಸಬರದ, ರಮೇಶ ಹೆಂಡಿ, ರಮೇಶ ಅಡಕಿ, ಕಾಶಿಂ ನಾಯ್ಕೋಡಿ, ಸುಧಾಕರ ಅಡಕಿ, ಬಸಯ್ಯ ಚಿಕ್ಕಮಠ, ಆನಂದ ಅಡಕಿ, ಶಿವರಾಜ ದೊರೆಗೋಳ, ಪ್ರವೀಣ ಗುಮಶೆಟ್ಟಿ, ಎಂ.ಎಲ್. ವಡ್ಡರ, ಮಹಮ್ಮದ ಉಸ್ತಾದ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಸರ್ವ ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮದ ಪ್ರಮುಖರು ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 