ಶಿಕ್ಷಣ, ಆರ್ಥಿಕ ಸಬಲತೆಗೆ ಒತ್ತು
Emphasis on education and economic empowerment
ಮುದ್ದೇಬಿಹಾಳ: ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣ ಕ್ಷೇತ್ರದಲ್ಲಿ ದೇವಾಂಗ ಸಮಾಜದವರು ಎಂದಿಗೂ ಹಿಂದೆ ಬಿದ್ದಿಲ್ಲ. ಶಿಕ್ಷಣದ ಜತೆಗೆ ಸಮಾಜವನ್ನು ಆರ್ಥಿಕವಾಗಿ ಸಬಲಗೊಳಿಸುವ ಕಾರ್ಯಕ್ಕೆ ಬಾಂಧವರು ಮುಂದಾಗಬೇಕು ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವ ತಮ್ಮ ಅನುಭವದಿಂದ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ ಎಂಬ ಅರಿವಾಗಿದೆ.
ಸಮಾಜದಲ್ಲಿನ ಕಡುಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತಮ್ಮಿಂದಾದ ನೆರವು ನೀಡುವುದಾಗಿ ಭರವಸೆ ನೀಡಿದರು. ದೇವಾಂಗ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲ ಭಾವಿಕಟ್ಟಿ ಮಾತನಾಡಿ, ಹಲವು ಕಷ್ಟಗಳನ್ನು ಎದುರಿಸಿ ಬಡದಾನಿ ಅವರು ಮುದ್ದೇಬಿಹಾಳದ ಬಿಇಒ ಆಗಿ ಸೇವೆಗೆ ಬಂದಿರುವುದು ಸಮಾಜಕ್ಕೆ ಹೆಮ್ಮೆಯ ಸಂಗತಿ. ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಶಕ್ತಿಮೀರಿ ಶ್ರಮಿಸುವುದಾಗಿ ತಿಳಿಸಿದರು. ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ. ಹೆಬ್ಬಾಳ ಮಾತನಾಡಿ, ಬಿಇಒ ಹುದ್ದೆ ಅತ್ಯಂತ ಜವಾಬ್ದಾರಿಯುತವಾಗಿದ್ದು, ಎಲ್ಲ ಸಮುದಾಯಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕಾರ್ಯನಿರ್ವಹಿಸಬೇಕು.
ಶಿಕ್ಷಕರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಕರ್ತವ್ಯ ನಿರ್ವಹಿಸದವರಿಗೆ ಸೂಕ್ತ ಸೂಚನೆ ನೀಡಿ ಉತ್ತಮ ಆಡಳಿತ ನೀಡುವಂತೆ ಸಲಹೆ ನೀಡಿದರು. ದೇವಾಂಗ ಸಮಾಜದ ಅಧ್ಯಕ್ಷ ಚನ್ನಬಸ್ಸು ಗುಡ್ಡದ, ಮುತ್ತಣ್ಣ ಪ್ಯಾಟಿಗೌಡರ ಮಾತನಾಡಿದರು. ಸಮಾಜದ ಹಿರಿಯರು ಹಾಗೂ ದೇವಾಂಗ ನೌಕರರ ಸಂಘದ ಸದಸ್ಯರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಮೃತಾ ಹೆಬ್ಬಾಳ ಹಾಗೂ ಅರ್ಿತಾ ಹೆಬ್ಬಾಳ ಸ್ವಾಗತ ಗೀತೆ ಹಾಡಿದರು. ಕಸ್ತೂರಿ ಗದೆಪ್ಪನವರ ಪ್ರಾರ್ಥಿಸಿದರು. ಸಂತೋಷ ಚಿತ್ತರಗಿ ನಿರೂಪಿಸಿದರು. ಸಿಆರ್ಿ ಸರಸ್ವತಿ ವಡವಡಗಿ ವಂದಿಸಿದರು. ಸೆಪ್ಟೆಂಬರ್ನಲ್ಲಿ ಪ್ರತಿಭಾ ಪುರಸ್ಕಾರ ದೇವಾಂಗ ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಲು ಸೆಪ್ಟೆಂಬರ್ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ಶ್ರೀಶೈಲ ಭಾವಿಕಟ್ಟಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 