ವಿಶೇಷ ಅನುದಾನದ ಬಳಕೆಗೆ ಒತ್ತುನೀಡಿ: ದೇಸಾಯಿ

ಧಾರವಾಡ: ಧಾರವಾಡ ತಾಲೂಕಿನ ವಿವಿಧ ಗ್ರಾಮಗಳಿಗೆ 2015-16ನೇ ಸಾಲಿನ ಗ್ರಾಮವಿಕಾಸ ಯೋಜನೆ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆ ಹಾಗೂ    2017-18ನೇ ಸಾಲಿನ ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡದೇ ವಿಳಂಬ ತೋರುವ ಅಧಿಕಾರಿಗಳ ವಿರುದ್ಧ ಸಕರ್ಾರಕ್ಕೆ ಶಿಸ್ತು ಕ್ರಮಕೈಗೊಳ್ಳಲು ಶಿಫಾರಸ್ಸು ಮಾಡಲಾಗುವುದು. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಶಾಸಕ ಅಮೃತ ದೇಸಾಯಿ ಹೇಳಿದರು.

ಅವರು ಇಂದು ಬೆಳಿಗ್ಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗ್ರಾಮವಿಕಾಸ ಮತ್ತು ಮಾದರಿ ಗ್ರಾಮ ಯೋಜನೆಗಳ ಆಥರ್ಿಕ ಮತ್ತು ಭೌತಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಈ ವಿಶೇಷ ಯೋಜನೆಗಳ ಕ್ರಿಯಾಯೋಜನೆಯಲ್ಲಿ ಅನುಮೋದನೆಗೊಂಡ ಕೆಲವು ಕಾಮಗಾರಿಗಳಿಗೆ ತಾಂತ್ರಿಕ ಸಮಸ್ಯೆ ಉಂಟಾಗುತ್ತಿದೆ ಎಂದು ಕೆಲ ಅಧಿಕಾರಿಗಳು ಹೇಳುತ್ತಿದ್ದಾರೆ. ಸಂಬಂಧಿತ ಇಲಾಖೆ ಅಧಿಕಾರಿಗಳು ಈ ಸಮಸ್ಯೆಗಳನ್ನು ಪರಿಹರಿಸಿ ತುತರ್ಾಗಿ ಕೆಲಸ ಪ್ರಾರಂಭಿಸಲು ಸೂಚಿಸಬೇಕು. ಮುಂದಿನ ದಿನಗಳಲ್ಲಿ 2015-16ನೇ ಸಾಲಿನ ಗ್ರಾಮವಿಕಾಸ ಯೋಜನೆಗೆ ಆಯ್ಕೆಯಾಗಿರುವ ಅಮ್ಮಿನಭಾವಿ, ಮರೇವಾಡ, ಕೋಟೂರ ಮತ್ತು ಉಪ್ಪಿನಬೆಟಗೇರಿ ಗ್ರಾಮಪಂಚಾಯತ್ನ ಹನುಮಕೊಪ್ಪ ಹಾಗೂ 2017-18 ನೇ ಸಾಲಿನ ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಗೆ ಅಯ್ಕೆಯಾಗಿರುವ ಮಾಧನಬಾವಿ, ಮಾರಡಗಿ ಗ್ರಾಮ ಪಂಚಾಯತ್ನ ಮಾರಡಗಿ ಹಾಗೂ ಸೋಮಾಪೂರ, ಕನಕೂರ ಗ್ರಾಮಪಂಚಾಯತಿಯ ವನಹಳ್ಳಿ ಮತ್ತು 2017-18ನೇ ಸಾಲಿನ ಮುಖ್ಯಮಂತ್ರಿ ಮಾದರಿ ಗ್ರಾಮಯೋಜನೆಯಡಿ ಆಯ್ಕೆ ಆಗಿರುವ ಹೆಬ್ಬಳ್ಳಿ, ಹಾರೋಬೆಳವಡಿ ಗ್ರಾಮಪಂಚಾಯತ್ನ ಕಬ್ಬೇನೂರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು.   ಆಯ್ಕೆ ಮಾಡಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕೆಂದು ಶಾಸಕರು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ ಮಾತನಾಡಿ, ಅಧಿಕಾರಿಗಳು ತಮ್ಮ ಇಲಾಖೆಗೆ ಬಂದಿರುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆಯಂತೆ ವೆಚ್ಚ ಮಾಡಬೇಕು. ಬದಲಾವಣೆ ಅಗತ್ಯವಿದ್ದಲ್ಲಿ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಿ, ಅನುಮೋದನೆ ಪಡೆಯಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಬಂದಿರುವ ಅನುದಾನದ ಸಮರ್ಪಕ ಬಳಕೆಗೆ ಮುತುವಜರ್ಿ ವಹಿಸಬೇಕು. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ತಿಳಿಸಿದರು. 

ವೇದಿಕಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದಶರ್ಿ ಎಸ್.ಜಿ. ಕೊರವರ, ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಫಕೀರಪ್ಪ ಬುಡ್ಡಿಕಾಯಿ ಉಪಸ್ಥಿತರಿದ್ದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಪಂಚಾಯತ್ರಾಜ್ ಇಂಜಿನೀಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕನರ್ಾಟಕ ಭೂ ಸೇನಾ ನಿಗಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಗ್ರಾಮೀಣ ಉದ್ಯೋಗ ಖಾತ್ರಿ ವಿಭಾಗದ ಸಹಾಯಕ ನಿದರ್ೆಶಕ ಪ್ರಶಾಂತ ತುರಕಾಣಿ ಸ್ವಾಗತಿಸಿದರು. ತಾಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಎಸ್.ಎಸ್. ಕಾದ್ರೊಳ್ಳಿ ವಂದಿಸಿದರು.