ಸರ್ಕಾರಿ ನೌಕರರ ಮೇಲೆ ದೌರ್ಜನ್ಯ ಖಂಡಿಸಿ ನೌಕರರ ಸಂಘದಿಂದ ಪ್ರತಿಭಟನೆ
Employees' union protests against atrocities on government employees
ಹೂವಿನಹಡಗಲಿ 18: ಈಚೆಗೆ ಸರಕಾರಿ ನೌಕರರ ಮೇಲೆ ನಿಂದನೆ. ದೌರ್ಜನ್ಯ .ಕರ್ತವ್ಯ ಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕ್ರಮ ಕೈಗೊಂಡು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಗುರುವಾರ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸ್ತ್ರೀಯ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.
ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎ.ಕೊಟ್ರಗೌಡ ಮಾತನಾಡಿ ಪಾರದರ್ಶಕ ಆಡಳಿತದ ದೃಷ್ಟಿಯಿಂದ ಜಾರಿಯಾದ ಮಾಹಿತಿ ಹಕ್ಕು ಕಾಯ್ದೆಯನ್ನು ಕೆಲ ಸಂಘಟನೆಗಳ .ಪಕ್ಷದವರು ದುರ್ಬಳಕೆ ಮಾಡಿಕೊಂಡು ನೌಕರರ ಮೇಲೆ ನೀಡುತ್ತಿರುವ ದೌರ್ಜನ್ಯ .ಶೋಷಣೆ ತಪ್ಪಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಜತೆಗೆ ಸರ್ಕಾರಿ ನೌಕರರು ನಿರ್ಭಯದಿಂದ ಕೆಲಸ ಮಾಡಿ ಕೊಡಲು ಅನುವ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ತಾ.ಪಂ.ಇಒ ಪರಮೇಶಪ್ಪ .ಸಿಡಿಪಿಒ ರಮನಗೌಡ ಮಾತನಾಡಿ ನೌಕರರ ಮೇಲೆ ಮೇಲೆ ನಿರಂತರವಾಗಿ ದೌರ್ಜನ್ಯ ಗಳ ತಡೆಯಬೇಕೆಂದು ಆಗ್ರಹಿಸಿದರು. ಬಿಇಒ ಮಹೇಶ್ ಪೂಜಾರ. ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆಅಧಿಕಾರಿ. ಅಂಬೇಡ್ಕರ್. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ್.ಉತ್ತಂಗಿ ಆನಂದ . ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು . ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ನಾನಾ ಇಲಖೆ ಅಧಿಕಾರಿಗಳು ಭಾಗವಹಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 