ಉದ್ಯೋಗ ಖಾತರಿ ಯೋಜನೆಯ ಪ್ರಚಾರ ಕಾರ್ಯಕ್ರಮ

ಲೋಕದರ್ಶನ ವರದಿ

ಬೆಟಗೇರಿ 17: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ 249 ರೂಪಾಯಿಗಳ ಸಮಾನ ಕೂಲಿ ನೀಡಲಾಗುವುದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಹೇಳಿದರು.

       ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ ಸಹಯೋಗದಲ್ಲಿ ಗುರುವಾರ ಅ.17 ರಂದು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಚಾರ ವಾಹಿನಿ ಸ್ವಾಗತ ಮತ್ತು ಪ್ರಚಾರ ಕಾರ್ಯಕ್ರಮದ ನೇತೃತ್ವ ವಹಿಸಿ, ಉದ್ಯೋಗ ಖಾತರಿ ಯೋಜನೆ ಮಾಹಿತಿಯುಳ್ಳ ಕರಪತ್ರ ವಿತರಿಸಿ ಮಾತನಾಡಿದರು.

      ಇಲ್ಲಿಯ ಗ್ರಾಮ ಪಂಚಾಯತ ಅಧಿಕಾರಿಗಳನ್ನು ಸ್ಥಳೀಯರು ಭೇಟಿಯಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ತಿಳಿಸಿದರು. ಗ್ರಾಮದ ಪ್ರಮುಖ ಸ್ಥಳ, ಬೀದಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಪ್ರಚಾರ ವಾಹಿನಿ ಮೂಲಕ ಗ್ರಾಮಸ್ಥರಲ್ಲಿ ತಿಳುವಳಿಕೆ ಮೂಡಿಸುವ ಕಾರ್ಯಕ್ರಮ ನಡೆಯಿತು.

      ಈ ವೇಳೆ ಗ್ರಾಪಂ ಪಿಡಿಒ ಬಿ.ಎಫ್.ದಳವಾಯಿ, ಕಾರ್ಯದರ್ಶಿ  ಗೌಡಪ್ಪ ಮಾಳೇದ, ಪರಶುರಾಮ ಇಟಗೌಡ್ರ, ಕಾಕ್ರ್ಲ ಸುರೇಶ ಬಾಣಸಿ, ವಿಠಲ ಚಂದರಗಿ, ಗ್ರಾಪಂ ಸದಸ್ಯ ಸುಭಾಷ ಕರೆಣ್ಣವರ, ಮಲ್ಲಪ್ಪ ಪಣದಿ, ಉದ್ದಪ್ಪ ಚಂದರಗಿ, ಮುತ್ತೆಪ್ಪ ವಡೇರ ಸೇರಿದಂತೆ ಸ್ಥಳೀಯ ಗ್ರಾಪಂ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು ಇದ್ದರು.