ಹೆಣ್ಣು ಮಕ್ಕಳ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲ: ಬಾಲ್ಯ ವಿವಾಹಕ್ಕೆ ಕಡಿವಾಣ ಅಗತ್ಯ

ಹೆಣ್ಣು ಮಕ್ಕಳ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲ: ಬಾಲ್ಯ ವಿವಾಹಕ್ಕೆ ಕಡಿವಾಣ ಅಗತ್ಯ Empowerment of girls is the source of progress in society: Child marriage needs to be curbed

ಲೋಕದರ್ಶನ ವರದಿ 

ಯರಗಟ್ಟಿ 18 : ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳ ಕುರಿತು ವಿಶೇಷ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “ಬೇಟಿ ಬಚಾವೋ, ಬೇಟಿ ಪಡಾವೋ” ಯೋಜನೆಯ ಉದ್ದೇಶಗಳು, ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಆರೋಗ್ಯ ಹಾಗೂ ಸಬಲೀಕರಣದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. 

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಯರಗಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗೋಪಾಲ ದಳವಾಯಿ, ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸುರಕ್ಷಿತ ವಾತಾವರಣ ಮತ್ತು ಆರೋಗ್ಯಕರ ಜೀವನ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಹೆಣ್ಣು ಮಕ್ಕಳು ಶಿಕ್ಷಣವಂತರಾದಾಗ ಕುಟುಂಬ, ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಾರೆ. ಆದ್ದರಿಂದ ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.