ಮಕ್ಕಳ ಸೃಜನಶೀಲತೆ ಪ್ರೋತ್ಸಾಹಿಸಿ: ರವೀಂದ್ರನಾಥ ಬಿ
Encourage children's creativity said Rabindranath B
ಹೂವಿನ ಹಡಗಲಿ 28: ಮಕ್ಕಳಿಲ್ಲಿ ಅಡಗಿರುವ ಸೃಜನಶೀಲತೆ ಪ್ರೇರೇಪಿಸುವ ಕೆಲಸ ಆಗಬೇಕು ಎಂದು ಉಪ ಪ್ರಾಂಶುಪಾಲ ರವೀಂದ್ರನಾಥ ಬಿ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಪಟ್ಟಣ ವ್ಯಾಪ್ತಿಯ 2025-26 ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾಷಣ ಗಾಯನ ಅಭಿನಯ ನೃತ್ಯ ಚಿತ್ರಕಲೆ ಹೀಗೆ ವಿವಿಧ ಪ್ರಕಾರಗಳಲ್ಲಿ ಮಕ್ಕಳ ಕಲಾವಂತಿಕೆ ಬೆಳೆಸಿಕೊಳ್ಳಬೇಕು, ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿಜೇತರಾದವರು ತಾಲೂಕು ಮಟ್ಟದಲ್ಲೂ ಸಾಧನೆ ಮಾಡಿರಿ ಎಂದು ಶುಭಕೋರಿದರು.ಪ್ರತಿಭಾ ಕಾರಂಜಿ ಸಂಚಾಲಕ ಕನ್ನಡ ವಿಷಯ ಶಿಕ್ಷಕ ರಾಮಪ್ಪ ಕೋಟಿಹಾಳ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು.
ಮುಖ್ಯ ಗುರು ಸುರೇಶ ಅಂಗಡಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್, ದೈಹಿಕ ಶಿಕ್ಷಕರಾದ ಯಂಕಾನಾಯ್ಕ್ ಶಿಕ್ಷಕರಾದ ಮುದ್ದಿ ಕಸ್ತೂರಿ ಲಲಿತಾ, ಪೂರ್ಣಿಮಾ ಸುಮಂಗಲಾ, ಶೋಭಾ ಬಸಪ್ಪ , ವೀರೇಶ್ ರೇವಡಿ ಬಸಮ್ಮ ಅಕ್ಕಿ, ಮೌಲಾಸಾಬ್ ಇತರರು ಇದ್ದರು.
ಪಟ್ಟಣ ವ್ಯಾಪ್ತಿಯ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 