ಮಾಧ್ಯಮಿಕ ಶಾಲೆ ಮಕ್ಕಳಿಗೆ ವಿಜ್ಞಾನ ಕಲಿಕೆಗೆ ಉತ್ತೇಜನ
Encouraging science learning among secondary school students
ಮಹದಾಪುರ 11 : ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಮಹದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಗಸ್ತ್ಯ ಫೌಂಡೇಶನ್ ವತಿಯಿಂದ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹದಾಪುರ ಕ್ಷೇತ್ರದ ಶಾಸಕ ಹಾಗೂ ಸಚಿವ ಎಂ.ಬಿ. ಪಾಟೀಲ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಜ್ಞಾನಾಧಾರಿತ ಕಲಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಕಲಿಕೆ ಮಕ್ಕಳಲ್ಲಿ ಹೊಸ ಆಲೋಚನೆ ಹಾಗೂ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಅಗಸ್ತ್ಯ ಫೌಂಡೇಶನ್ನ ವತಿಯಿಂದ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯವನ್ನು ಪ್ರಾಯೋಗಿಕವಾಗಿ ಕಲಿಯಲು ಅನುಕೂಲವಾಗಲಿದೆ. ವಿಜ್ಞಾನ ಕ್ಷೇತ್ರದಲ್ಲಿ ಮಕ್ಕಳ ಆಸಕ್ತಿ ಹೆಚ್ಚಿಸಿ, ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳನ್ನು ರೂಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಅಗಸ್ತ್ಯ ಫೌಂಡೇಶನ್ನ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 