ಮಸೀದಿ ಬಳಿ ಅತಿಕ್ರಮಣ ತೆರವು-ಕಲ್ಲುತೂರಾಟ
Encroachment clearance near mosque-stone pelting
ನವದೆಹಲಿ: ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ (MCD) ಬುಧವಾರ ಮುಂಜಾನೆ ಫೈಜ್ ಇ ಇಲಾಹಿ ಮಸೀದಿ ಸಮೀಪದ ತುರ್ಕ್ ಮನ್ ಗೇಟ್ ಪ್ರದೇಶದಲ್ಲಿನ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಲ್ಲುತೂರಾಟ, ಘರ್ಷಣೆ ನಡೆದ ಘಟನೆ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಮಸೀದಿ ಸಮೀಪದಲ್ಲಿನ ಅತಿಕ್ರಮಣ ಕಟ್ಟಡಗಳನ್ನು ತೆರವುಗೊಳಿಸುತ್ತಿದ್ದಾಗ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾರಿಕೇಡ್ ತಳ್ಳಿ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿರುವುದಾಗಿ ವರದಿ ವಿವರಿಸಿದೆ. ಬುಧವಾರ ನಸುಕಿನ 1ಗಂಟೆಗೆ ಫೈಝ್ ಇ ಇಲಾಹಿ ಮಸೀದಿಯ ತುರ್ಕ್ ಮನ್ ಗೇಟ್ ಪ್ರದೇಶದಲ್ಲಿರುವ ಸುಮಾರು 100 ವರ್ಷಗಳಷ್ಟು ಹಳೆಯ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಎಂಸಿಡಿ ಅಧಿಕಾರಿಗಳು ತಿಳಿಸಿದ್ದಾರೆ.
ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ಸುಮಾರು 25 ಬುಲ್ಡೋಜರ್ ಗಳನ್ನು ಬಳಸಲಾಗಿದೆ. ಅಲ್ಲದೇ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದವರನ್ನು ಸಿಸಿಟಿವಿ ಆಧಾರದ ಮೇಲೆ ಗುರುತು ಪತ್ತೆ ಹಚ್ಚಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2025ರ
ನವೆಂಬರ್ ನಲ್ಲಿ ದೆಹಲಿ ಹೈಕೋರ್ಟ್, ರಾಮಲೀಲಾ ಮೈದಾನ ಸಮೀಪದ ತುರ್ಕ್ ಮನ್ ಗೇಟ್ ಪ್ರದೇಶದಲ್ಲಿನ 38,940 ಚದರ ಅಡಿ ಅತಿಕ್ರಮಣ ಕಟ್ಟಡವನ್ನು ಮೂರು ತಿಂಗಳೊಳಗೆ ತೆರವುಗೊಳಿಸುವಂತೆ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಮತ್ತು ಲೋಕೋಪಯೋಗಿ ಇಲಾಖೆಗೆ ಆದೇಶ ನೀಡಿತ್ತು.
ತುರ್ಕ್ ಮನ್ ಗೇಟ್ ಪ್ರದೇಶದಲ್ಲಿನ ಕಟ್ಟಡದ ಮಾಲೀಕತ್ವದ ಬಗ್ಗೆ ಮಸೀದಿಯ ಆಡಳಿತ ಮಂಡಳಿಯಾಗಲಿ ಅಥವಾ ದೆಹಲಿ ವಕ್ಫ್ ಮಂಡಳಿಯಾಗಲಿ ಸೂಕ್ತ ಪುರಾವೆಗಳನ್ನು ನೀಡದ ಹಿನ್ನೆಲೆಯಲ್ಲಿ 0.195 ಎಕರೆ ಪ್ರದೇಶದಲ್ಲಿನ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಎಂಸಿಡಿ ಡಿಸೆಂಬರ್ ನಲ್ಲಿ ತಿಳಿಸಿತ್ತು.
ಅತಿಕ್ರಮಣ ಪ್ರದೇಶದಲ್ಲಿ ರಸ್ತೆಯ ಒಂದು ಭಾಗ, ಪಾದಚಾರಿ ಮಾರ್ಗ, ಬರಾತ್ ಘರ್, ಪಾರ್ಕಿಂಗ್ ಹಾಗೂ ಖಾಸಗಿ ಕ್ಲಿನಿಕ್ ಗಳು ಸೇರಿರುವುದಾಗಿ ವರದಿ ತಿಳಿಸಿದೆ. ಅತಿಕ್ರಮಣ ಪ್ರದೇಶ ತೆರವುಗೊಳಿಸುವ ಕಾರ್ಯಾಚರಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಂಗಳವಾರ (ಜ.06) ನಗರಾಭಿವೃದ್ಧಿ ಸಚಿವಾಲಯ, ಎಂಸಿಡಿ ಹಾಗೂ ದೆಹಲಿ ವಕ್ಫ್ ಮಂಡಳಿಗೆ ನೋಟಿಸ್ ಜಾರಿಗೊಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 