ಗದಗ 20: ಗಂಡು ಮತ್ತು ಹೆಣ್ಣು ಮಕ್ಕಳ ತಾರತಮ್ಯ ಕೊನೆಗೊಳಿಸಿ ಅವರನ್ನು ಸಮಾನರನ್ನಾಗಿ ಬೆಳೆಸಲು ಪಣ ತೊಡುವುದು ಇಂದಿನ ಅಗತ್ಯವಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನುಡಿದರು.
ಗದಗ-ಬೆಟಗೇರಿ ನಗರದ ಗಾಂಧೀ ವೃತ್ತದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜಾಗೃತಿ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಲಿಂಗ ಸಮಾನತೆ ಬಗ್ಗೆ ಪ್ರತಿಯೊಬ್ಬರಲ್ಲೂ ಜಆಗೃತಿ ಮೂಡಿಸಬೇಕಾಗಿದೆ. ಆಧುನಿಕ, ಸ್ಪರ್ಧಾತ್ಮಕ ದಿನಗಳಲ್ಲಿ ಗಂಡು-ಹೆಣ್ಣು ಎಂಬ ಬೇಧ ಸಲ್ಲದು. ಗಂಡು ಮಕ್ಕಳಷ್ಟೇ ಹೆಣ್ಣು ಮಕ್ಕಳನ್ನು ಎಲ್ಲ ವಿಷಯಗಳಲ್ಲಿ ಸಮಾನ ಅವಕಾಶ ನೀಡುವ ಕುರಿತು ಎಲ್ಲ ಪಾಲಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮಂಜುನಾಥ ಬಮ್ಮನಕಟ್ಟಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋದಲ್ಲಿ ಎರಡು ಬಾರಿ ರಾಷ್ಷ್ರೀಯ ಪ್ರಶಸ್ತಿ ಪಡೆದುಕೊಂಡಿದ್ದು, ಜಿಲ್ಲೆಯಲ್ಲಿ ಪ್ರತಿಯೊಂದು ಹೆಣ್ಣು ಮಗುವಿಗೆ ಶಿಕ್ಷಣದ ಜೊತೆಗೆ ಎಲ್ಲ ಅವಕಾಶಗಳು ದೊರೆಯುವಂತೆ ಪಾಲಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕು.ಸಿದ್ದಲಿಂಗೇಶ ಪಾಟೀಲ, ಜಿಲ್ಲಾ ಪಂಚಾಯ್ತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಜಿ.ಪಂ. ಸಿಇಓ ಡಾ.ಕೆ.ಆನಂದ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್.ಜಿ. ಸಲಗರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೆಶಕಿ ಡಾ. ಎಚ್. ಎಚ್. ಕುಕನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ, ಜಿಲ್ಲಾ ಯುವಜನ ಸೇವಾ ಕ್ರೀಡಾಧಿಕಾರಿ ವಿಶ್ವನಾಥ, ಕಾನೂನು ಪರಿವೀಕ್ಷಣಾಧಿಕಾರಿ ಪ್ರಕಾಶ ವಾಲಿ, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ರಾಜು ಕಂಟಿಗೌಡರ, ಗಿರಿಜಾ ದೊಡ್ಡಮನಿ ಸೇರಿದಂತೆ, ಅಂಗನವಾಡಿ ಮೇಲ್ವಿಚಾರಕಿಯರು, ಸ್ತ್ರೀ ಶಕ್ತಿ ಸಂಘಟನೆಯ ಸದಸ್ಯರು,ಡಿಸಿಪಿಯು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಹಿಳೆಯರು ಪೂರ್ಣಕುಂಭದೊಂದಿಗೆ ಜಾಗೃತಿ ಫೋಷಣೆಗಳ ಫಲಕ ಹೊತ್ತು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಭೂಮರೆಡ್ಡಿ ವೃತ್ತದಲ್ಲಿ ಕುಸ್ತಿಪಟುಗಳು ಹಾಗೂ ಬಾಲ ಮಂದಿರದ ಮಕ್ಕಳು ಸೇರಿಕೊಂಡು ಮಾನವ ಸರಪಳಿ ನಿಮರ್ಿಸಿ ಜಾಗೃತಿ ಉಂಟು ಮಾಡಿದರು.
ಮಗಳನ್ನು ಉಳಿಸಿ, ಮಗಳನ್ನು ಓದಿಸುವಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಕ್ರೀಡಾಂಗಣದಲ್ಲಿ ಸಹಿ ಸಂಗ್ರಹ ಹಾಗೂ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.