ಸಮಾಜದಲ್ಲಿ ಎಂಜಿನಿಯರ್ಗಳ ಪಾತ್ರ ಮುಖ್ಯ
Engineers play a crucial role in society
ಲೋಕದರ್ಶನ ವರದಿ
ಧಾರವಾಡ 16: ಬ್ರಿಟಿಷ್ ಪ್ರಾಂತ್ಯ, ಮುಂಬೈ ಸರ್ಕಾರ, ಹೈದರಾಬಾದ್ ನಿಜಾಮರ ದರ್ಬಾರ್ ಹಾಗೂ ಮೈಸೂರು ಮಹಾರಾಜರ ಆಳ್ವಿಕೆಯಲ್ಲಿ ಸೇವೆ ಸಲ್ಲಿಸಿದ್ದ ಸರ್. ಎಂ. ವಿಶ್ವೇಶ್ವರಯ್ಯ ಅವರು ಶ್ರೇಷ್ಠ ಎಂಜಿನಿಯರ್ ಆಗಿ, ದಿವಾನರಾಗಿ ಸೇವೆ ಸಲ್ಲಿಸಿದರು. 1916ರಲ್ಲಿ ಬ್ರಿಟಿಷ್ ಸರ್ಕಾರ ಅವರಿಗೆ ‘ಸರ್’ ಪದವಿ ನೀಡಿ ಗೌರವಿಸಿತ್ತು ಎಂದು ನಿವೃತ್ತ ಪ್ರಧಾನ ಎಂಜಿನಿಯರ್ ಎಂ.ಬಿ. ಪರ್ಪಗೌಡ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಎಸ್.ಜಿ. ಬಾಳೇಕುಂದ್ರಿ ದತ್ತಿ ಅಂಗವಾಗಿ ‘ಕೀರ್ತಿಶೇಷ ಎಸ್.ಜಿ. ಬಾಳೇಕುಂದ್ರಿ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಸ್ಮರಣೆ ಹಾಗೂ ಎಂಜಿನಿಯರ್ ದಿನಾಚರಣೆ’ ಅಂಗವಾಗಿ ಸೆ.15ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಸಮಾಜದಲ್ಲಿ ಎಂಜಿನಿಯರ್ಗಳ ಪಾತ್ರ’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.
ನೀರಾವರಿ ಕ್ಷೇತ್ರದಲ್ಲಿ ಎಸ್.ಜಿ. ಬಾಳೇಕುಂದ್ರಿ ಅವರ ಕೊಡುಗೆ ಅಪಾರವಾಗಿದ್ದು, ಮಲಪ್ರಭಾ ಎಡದಂಡೆ ಕಾಲುವೆ, ನವಿಲುತೀರ್ಥ ಹಾಗೂ ನಾರಾಯಣಪುರ ಅಣೆಕಟ್ಟು ನಿರ್ಮಾಣ ಕಾರ್ಯಗಳಲ್ಲಿ ಅವರ ನೈಪುಣ್ಯ ಗಮನಾರ್ಹವಾಗಿದೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೂ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ವಾಸುದೇವ ಪರ್ವತಿ ಮಾತನಾಡಿ, ಎಂಜಿನಿಯರ್ಗಳು ಸರ್. ಎಂ. ವಿಶ್ವೇಶ್ವರಯ್ಯ ಹಾಗೂ ಎಸ್.ಜಿ. ಬಾಳೇಕುಂದ್ರಿ ಅವರನ್ನು ಆದರ್ಶವಾಗಿಟ್ಟುಕೊಂಡು ಕೌಶಲ್ಯ ಬೆಳೆಸಿಕೊಳ್ಳಬೇಕು. ಹೊಸ ತಲೆಮಾರಿನ ಎಂಜಿನಿಯರ್ಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಬೇಕು ಎಂದರು.
ಶಂಕರ ಕುಂಬಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವೇಶ್ವರಿ ಹಿರೇಮಠ ನಿರೂಪಿಸಿದರು. ಶಿವಾನಂದ ಭಾವಿಕಟ್ಟಿ ವಂದಿಸಿದರು. ಸತೀಶ ತುರಮರಿ, ಎನ್.ಆರ್. ಬಾಳಿಕಾಯಿ, ಎಂ.ಎಸ್. ವಸ್ತ್ರದ, ರಾಜೇಂದ್ರ ಸಾವಳಗಿ, ಬಿ.ಎಸ್. ಪತಿಮಠ, ಎಂ.ಎಂ. ಚಿಕ್ಕಮಠ, ಎಸ್.ಕೆ. ಕುಂದರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 