ಇಂಗ್ಲೆಂಡ್ ತಂಡದ ನಾಯಕತ್ವದಿಂದ ಇಳಿದ ಇಯಾನ್ ಮಾರ್ಗನ್
ಲಂಡನ್, ಆ 17 ಇಂಗ್ಲೆಂಡ್ಗೆ ಚೊಚ್ಚಲ ಐಸಿಸಿ ವಿಶ್ವಕಪ್ ತಂದುಕೊಟ್ಟ ನಾಯಕ ಇಯಾನ್ ಮಾರ್ಗನ್ ಅವರು ಸತತ ಗಾಯದಿಂದಾಗಿ ನಿಗದಿತ ಓವರ್ಗಳ ತಂಡದ ನಾಯಕತ್ವದಿಂದ ಹಿಂದೆ ಸರಿದಿದ್ದಾರೆ.
ಸೌಥ್ಹ್ಯಾಮ್ಟನ್ನಲ್ಲಿ ನಡೆದಿದ್ದ ಐಸಿಸಿ ವಿಶ್ವಕಪ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಮಾರ್ಗನ್ ಬೆನ್ನು ಸೆಳೆತಕ್ಕೆ ಒಳಗಾಗಿದ್ದರು. ಇನ್ನೂ ಅವರು ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹಾಗಾಗಿ, ಇಂಗ್ಲೆಂಡ್ ತಂಡದ ನಾಯಕತ್ವವನ್ನು ತೊರೆದಿದ್ದಾರೆ.
ಮುಂಬರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸುತ್ತೀರಾ ಎಂದು ಟೆಸ್ಟ್ ವಿಶೇಷ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೊಡ್ಡ ನಿರ್ಧಾರ-ದೊಡ್ಡ ಬದ್ಧತೆ ಇದಾಗಿದೆ. ಹಾಗಾಗಿ, ಇದರ ಬಗ್ಗೆ ಯೋಚನೆ ಮಾಡಲು ಹೆಚ್ಚಿನ ಸಮಯಬೇಕು ಎಂದು ಮಾರ್ಗನ್ ಹೇಳಿದರು.
ವಿಶ್ವಕಪ್ ಟೂರ್ನಿಯಲ್ಲಿ ಗಾಯದ ನಡುವೆಯೂ ಆಡಬೇಕಾಯಿತು. ಗಾಯದಿಂದ ಸಂಪೂರ್ಣ ಫಿಟ್ ಆಗಬೇಕಾದರೆ ಇನ್ನೂ ಹೆಚ್ಚಿನ ಸಮಯಬೇಕು. ಮುಂಬರುವ ಟಿ-20 ವಿಶ್ವಕಪ್ನಲ್ಲೂ ತಂಡವನ್ನು ಮುನ್ನಡೆಸುವ ಆಲೋಚನೆ ಇದೆ. ಆದರೆ, ತನ್ನ ಹಿತಾಸಕ್ತಿಯಿಂದ ಬೇರೆ ಯಾರನ್ನೂ ತುಳಿಯಲು ನನಗೆ ಇಷ್ಟವಿಲ್ಲ ಎಂದು ಮಾರ್ಗನ್ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 