ಇಂಗ್ಲೆಂಡ್ ವೇಗಿ ಒಲ್ಲಿ ಸ್ಟೋನ್ ಆ್ಯಶಸ್ ಸರಣಿಯಿಂದ ಔಟ್

ಲಂಡನ್, ಆ 17      ಬೆನ್ನು ನೋವಿಗೆ ಒಳಗಾಗಿರುವ ಇಂಗ್ಲೆಂಡ್ ತಂಡದ ವೇಗಿ ಒಲ್ಲಿ ಸ್ಟೋನ್ ಅವರು ಪ್ರಸ್ತುತ ನಡೆಯುತ್ತಿರುವ ಆ್ಯಶಸ್ ಸರಣಿಯ ಇನ್ನುಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.   

ಇದೇ ವರ್ಷದ ಆರಂಭದಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಒಲ್ಲಿ ಸ್ಟೋನ್ ಅವರು ಬೆನ್ನಿನ ಎಡಭಾಗದಲ್ಲಿ ನೋವಿಗೆ ಒಳಗಾಗಿದ್ದರು. ಇದರಿಂದಾಗಿ ಅವರು ಅಂದು ವಿಂಡೀಸ್ ವಿರುದ್ಧದ ಸರಣಿಯಿಂದ ಹೊರ ನಡೆದಿದ್ದರು. ಇದೀಗ ಮತ್ತೊಮ್ಮೆ ಅದೇ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದು ಆ್ಯಶಸ್ ಸರಣಿಯ ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.  

ಕಳೆದ ಜುಲೈನಲ್ಲಿ ರಾಷ್ಟ್ರೀಯ ತಂಡಕ್ಕೆ ಮರಳಿದ್ದ ಒಲ್ಲಿ ಸ್ಟೋನ್ ಅವರು ಐರ್ಲ್ನ್ಡ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಅವರು ಮೂರು ವಿಕೆಟ್ ಕಿತ್ತಿದ್ದರು. ಇದನ್ನು ಪರಿಗಣಿಸಿ ಅವರನ್ನು ಆ್ಯಶಸ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಮೊದಲ ಪಂದ್ಯದಲ್ಲಿ ಅಂತಿಮ 11ರಲ್ಲಿ ಅವಕಾಶ ಸಿಕ್ಕಿರಲಿಲ್ಲ. ಈ ಪಂದ್ಯದಲ್ಲಿ ಇಂಗ್ಲೆಂಡ್ 251 ರನ್ಗಳಿಂದ ಸೋಲು ಅನುಭವಿಸಿತ್ತು.  

ಕಳೆದ ವಾರ 25ರ ಪ್ರಾಯದ ವೇಗಿ ತರಬೇತಿ ವೇಳೆ ಗಾಯಕ್ಕೆ ಒಳಗಾಗಿದ್ದರು. ಚೇತರಿಸಿಕೊಳ್ಳುವ ಲಕ್ಷಣಗಳು ಕಾಣದ ಹಿನ್ನೆಲೆಯಲ್ಲಿ ಅವರು ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.