ಬೆಂಗಳೂರು, ಜ.7-ಸಕರ್ಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷಾ ಮಾಧ್ಯಮ ವಿಷಯವಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಅತಿ ಹೆಚ್ಚು ವಿದ್ಯಾಥರ್ಿಗಳಿರುವ ಒಂದು ಸಾವಿರ ಸಕರ್ಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಇಂಗ್ಲಿಷ್ ಭಾಷಾ ಮಾಧ್ಯಮಗಳನ್ನು ಬೋಧಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈಗ ಅದು ವಿವಾದಕ್ಕೆ ಗುರಿಯಾಗಿದ್ದು, ಸಾಹಿತ್ಯ ಸಮ್ಮೇಳನದಲ್ಲೂ ಇಂಗ್ಲಿಷ್ ಭಾಷಾಮಾಧ್ಯಮಕ್ಕೆ ವಿರೋಧ ವ್ಯಕ್ತವಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಕಲಿತವರೆಲ್ಲ ದಡ್ಡರಲ್ಲ. ಕನರ್ಾಟಕದಲ್ಲಿ ಕನ್ನಡ ಮಾಧ್ಯಮ ಮುಖ್ಯವಾಗಬೇಕು.ಇಂಗ್ಲಿಷ್ ಮಾಧ್ಯಮ ಅಗತ್ಯ ಇಲ್ಲ ಎಂಬರ್ಥದಲ್ಲಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ್ದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು.ತಾವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿಲುವನ್ನು ಹೇಳಿದ್ದಾರೆ.