ಶಿವಪುರ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಎಲ್.ಕೆ.ಜಿ. - ಯುಕೆಜಿ ಆರಂಭ
English-medium LKG and UKG classes started at Shivapura Government School
ತಾಳಿಕೋಟೆ ಜು. 3: 2026 - 27 ಶೈಕ್ಷಣಿಕ ವರ್ಷದಿಂದ ಶಿವಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದ್ದು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ. ದಮೂರಮಠ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ಆಂಗ್ಲ ಮಾಧ್ಯಮದ ಪೂರ್ವ ಪ್ರಾಥಮಿಕ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ನೀಡಿ ಮಕ್ಕಳಿಗೆ ಶಿಕ್ಷಣ ನೀಡುವುದು ಎಲ್ಲರಿಗೂ ಸಾಧ್ಯವಿಲ್ಲ.
ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿಯೇ ಉಚಿತವಾಗಿ ಪಡೆಯಬಹುದಾಗಿದೆ. ಆದ್ದರಿಂದ ಪಾಲಕರು ಸರ್ಕಾರಿ ಶಾಲೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಶಿಕ್ಷಕಿ ಆರಿ್ಡ. ಆಲೂರು ಮಾತನಾಡಿ, ಹೊಸದಾಗಿ ಆರಂಭಿಸಿರುವ ಆಂಗ್ಲ ಮಾಧ್ಯಮದ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಗುಣಮಟ್ಟದ ಬೋಧನೆ, ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಈಗಾಗಲೇ ಎಲ್ಕೆಜಿಗೆ 25 ಹಾಗೂ ಯುಕೆಜಿಗೆ 15 ಸೇರಿ ಒಟ್ಟು 40 ಮಕ್ಕಳು ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು. ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಮುರಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 