ಬಾಗಲಕೋಟೆ: ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸುವದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಶಕ್ತಿ ವೃದ್ದಿಸಿಕೊಳ್ಳಬಹುದಾಗಿದೆ ಎಂದು ಶಾಸಕ ವೀರಣ್ಣ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲಿಕರಣ ಮತ್ತು ಕ್ರೀಢಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಯಲ್ಲಿ ಭಾಗವಹಿಸುವ ಸ್ಪಧರ್ಿಗಳಲ್ಲಿ ಚೈತನ್ಯ ತುಂಬರಬೇಕು. ಅಂದಾಗ ನಮ್ಮ ಮಕ್ಕಳು ರಾಷ್ಟೀಯ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಹೆಸರು, ಖ್ಯಾತಿ ಗಳಿಸಲು ಸಾಧ್ಯ ಎಂದರು.
ಇಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚು ಮಹತ್ವ ದೊರೆತಿದ್ದು, ನಮ್ಮ ಕ್ರೀಡಾಪಟುಗಳು ದೇಶ ವಿದೇಶಗಳಲ್ಲಿ ಪ್ರಶಸ್ತಿ ತರುವದರ ಜೊತೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಬೆಳ್ಳಿಯ ಹಾಗೂ ಬಂಗಾರದ ಪದಕ ಪಡೆದು ಜಿಲ್ಲೆಗೆ ಕೀತರ್ಿ ತಂದಿದ್ದಾರೆ.
ಯುವಕರು ಹಾಗೂ ಯುವತಿಯರು ಕ್ರೀಡೆಗಳಿಗೆ ಹೆಚ್ಚಿನ ಒತ್ತು ಕೊಡಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಕಡೆ ಮಹತ್ವ ಕೊಡದೇ ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಬೇಕು.
ಮುಖ್ಯ ಅಥಿತಿಗಳಾದ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟಿಲ್ ಮಾತನಾಡಿ ಕಲಿಕೆಯ ಜೊತೆಗೆ ಇಂತಹ ಕ್ರೀಡಾ ಚಟುವಟಿಗಳಲ್ಲಿ ಪಾಲ್ಗೊಳ್ಳಬೇಕು. ಒಂದು ದೇಶದ ಉತ್ತಮ ಸಂಪತ್ತು ಎಂದರೆ ಇಂದಿನ ಮಕ್ಕಳಾಗಿದ್ದು, ಕ್ರೀಡೆಯಲ್ಲಿ ನಮ್ಮ ದೇಶ ಹೊಸ ಇತಿಹಾಸವನ್ನು ಬರೆಯುತ್ತಿದೆ. ಕ್ರೀಡೆ ಎಂಬುವುದು ಭಾವೈಕ್ಯತೆಯ ಸಂಗಮವಾಗಿದ್ದು, ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಿದರೆ ದೇಶದ ಆಸ್ತಿಯಾಗಲು ಸಾಧ್ಯ. ಅದಕ್ಕಾಗಿ ಕ್ರೀಡೆ ಜೀವನಕ್ಕೆ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ತಾಲೂಕಾ ಪಂಚಾಯತ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿ.ಪಂ ಸದಸ್ಯರಾದ ಹೂವಪ್ಪ ರಾಠೋಡ, ಹನಮವ್ವ ಕರಿಹೊಳೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರಿ ಸಹಾಯಕ ನಿದರ್ೇಶಕ ಎಂ.ಎನ್.ಮೇಲಿನಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಕ್ರೀಡಾ ಧ್ವಜಾರೋಹಣ ನಂತರ ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು. ಅಂತರರಾಷ್ಟ್ರ ಮಟ್ಟದ ಕ್ರೀಡಾಪಟು ಐಶ್ವರ್ಯ ಸಂಶಿ ಪ್ರತಿಜ್ಞಾವಿಧಿ ಭೋದಿಸಿದರು. ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ತೆರೆಯಲಾದ ಒಳಾಂಗಣ ಗರಡಿ ಮನೆಯನ್ನು ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಕುಸ್ತಿ ಪಂದ್ಯಾಟಕ್ಕೆ ಚಾಲನೆ ನೀಡುವ ಮೂಲಕ ಕ್ರೀಡಾಕೂಟಗಳನ್ನು ಪ್ರಾರಂಭಿಸಲಾಯಿತು.