ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಿ: ಶಾಸಕ ಕೃಷ್ಣನಾಯ್ಕ
Ensure benefits of government schemes reach workers: MLA Krishna Nayak
ಹೂವಿನಹಡಗಲಿ, ಸೆ. 9: ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಎಲ್ಲ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಕಾರ್ಮಿಕರಿಗೆ ತಲುಪಿಸುವಂತೆ ಶಾಸಕ ಕೃಷ್ಣನಾಯ್ಕ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.
ಕಾರ್ಮಿಕರಿಗಾಗಿ ಪಿಂಚಣಿ, ದುರ್ಬಲತೆ ಪಿಂಚಣಿ, ಟೂಲ್ಕಿಟ್, ಹೆರಿಗೆ, ಅಂತ್ಯಕ್ರಿಯೆ, ಶಿಕ್ಷಣ, ವೈದ್ಯಕೀಯ, ಅಪಘಾತ, ಮದುವೆ ಹಾಗೂ ತಾಯಿ-ಮಗು ಸಹಾಯಧನ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಪ್ರತಿಯೊಬ್ಬ ಕಾರ್ಮಿಕರೂ ಕಾರ್ಮಿಕ ಕಾರ್ಡ್ ಪಡೆದುಕೊಂಡು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಕುರಿತು ಸೂಕ್ತ ಮಾಹಿತಿ ನೀಡುವುದರ ಜೊತೆಗೆ, ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಸೌಲಭ್ಯಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೃಷ್ಣನಾಯ್ಕ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 