ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಜಿಲ್ಲಾಧಿಕಾರಿ
Ensure that special incentive funds are deposited for sugarcane growers: District Collector
ಲೋಕದರ್ಶನ ವರದಿ
ಕಾರವಾರ, ಏ. 2 : ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಮೆಟ್ರಿಕ್ ಟನ್ ಗೆ ರೂ.50 ರಂತೆ ಪ್ರೋತ್ಸಾಹ ಧನವನ್ನು ನೀಡಲು ಹಾಗೂ ನಿಗಧಿ ಪಡಿಸಿದ ಕಾರ್ಖಾನೆಯವರು ರೈತರಿಗೆ ಪ್ರತಿ ಮೆಟ್ರಿಕ್ ಟನ್‌ಗೆ ರೂ.50 ರಂತೆ ಹೆಚ್ಚುವರಿ ಒಟ್ಟು ರೂ.100 ರಂತೆ ಮೊತ್ತವನ್ನು ಪಾವತಿಸಲು ಆದೇಶಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ಕರ್ನಾಟಕ ರಾಜ್ಯ ರೈತರಿಗೆ ದಿ.15-2-2026 ರಲ್ಲಿ ಅರೆದಿರುವ ಕಬ್ಬಿನಪ್ರಮಾಣಕ್ಕೆ ಉತ್ತರ ಕನ್ನಡ ಜಿಲ್ಲೆಯ ಇ.ಐ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆ ರವರಿಗೆ ನೇರವಾಗಿ ಪಾವತಿಸುವಂತೆ ರೂ.5,57,39,531 ಹಾಗೂ ಫೆ.15 ರ ನಂತರ ಅವಧಿಗೆ ಅರೆದಿರುವ ಕಬ್ಬಿನ ಪ್ರಮಾಣಕ್ಕೆ ರೂ.59055 ಗಳನ್ನು ಬಿಡುಗಡೆ ಮಾಡಿರುತ್ತಾರೆ.
ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯವರು ಅರೆದಿರುವ ಒಟ್ಟು 11,15,971.72 ಮೆಟ್ರಿಕ್ ಟನ್‌ಗೆ ಒಟ್ಟು 14,082 ಕರ್ನಾಟಕ ರಾಜ್ಯ ರೈತರಿಗೆ ಪ್ರತಿ ಮೆಟ್ರಿಕ್ ಟನ್ ಗೆ ರೂ.50 ರಂತೆ ಒಟ್ಟು ರೂ.5,57,98,586ಗಳನ್ನು ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಬಿಡುಗಡೆ ಮಾಡಲಾಗಿದೆ.
ಸರ್ಕಾರದ ಆದೇಶದಂತೆ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಪ್ರತಿ ಮೆಟ್ರಿಕ್ ಟನ್ ಗೆ ರೂ.50 ರಂತೆ ಸರ್ಕಾರದಿಂದ ಬಿಡುಗಡೆಯಾದ ರೂ 5,57,98,586 ಗಳನ್ನು ಹಾಗೂ ಕಾರ್ಖಾನೆಯಿಂದ ಪಾವತಿಸಬೇಕಾದ ಪ್ರತಿ ಟನ್‌ಗೆ ರೂ.50 ರಂತೆ ರೂ 5,57,98,586 ಹಣವನ್ನು ಎರಡನ್ನು ಸೇರಿಸಿ 14082 ರೈತರಿಗೆ ಪ್ರತಿ ಮೆಟ್ರಿಕ್ ಟನ್ ಗೆ ರೂ 100 ರಂತೆ ರೂ.11,15,97,172 ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಇಐಡಿ ಸಕ್ಕರೆ ಕಾರ್ಖಾನೆಯವರು ವರದಿ ಮಾಡಿರುತ್ತಾರೆ.
ಆದ್ದರಿಂದ ಉತ್ತರ ಕನ್ನಡ ಜಿಲ್ಲೆಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರು ಹಣ ಪಾವತಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 