ಅಂಗವಿಕಲ ಶಿಶು ಕಲ್ಯಾಣ ಕೇಂದ್ರಗಳಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಿ: ಡಾ. ಸುರೇಶ ಬಿ.ಇಟ್ನಾಳ
Ensure that there is no shortage in disabled child welfare centers: Dr. Suresh B. Itnal
ಎಸ್‌ಸಿಪಿ-ಟಿಎಸ್‌ಪಿ ಪ್ರಗತಿ ಪರೀಶೀಲನಾ ಸಭೆ
ಕೊಪ್ಪಳ 19 : ಎಸ್‌ಸಿಪಿ-ಟಿಎಸ್‌ಪಿಯ ಯೋಜನೆಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ ಕಾಮಗಾರಿಗಳ ಗುಣಮಟ್ಟ ಕಾಪಾಡಿ ಹಾಗೂ ಅಂಗವಿಕಲ ಶಿಶು ಕಲ್ಯಾಣ ಕೇಂದ್ರಗಳಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಆಗಷ್ಟ್-2025ರ ಅಂತ್ಯದವರೆಗಿನ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಸಂಬಂಧಿಸಿದ ಸಮುದಾಯಗಳ ಮನವಿಯನ್ನು ಪರೀಶೀಲಿಸಿ. ಅಂಗವಿಕಲರ ಕಲ್ಯಾಣಕ್ಕಾಗಿ ನಿಯೋಜಿಸಿದ ಹಣವನ್ನು ಸರಿಯಾಗಿ ಉಪಯೋಗಿಸಿ. ಕೊಪ್ಪಳದ ಬಿ.ಟಿ ಪಾಟೀಲ ನಗರದಲ್ಲಿರುವ ಅಂಗವಿಕಲ ಮಹಿಳಾ ಹಿರಿಯ ನಾಗರಿಕರ ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರ ವಹಿಸಿ ಎಂದು ಹೇಳಿದರು.ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ಮಾಣದ ಯಾವುದೇ ಸಿವಿಲ್ ಕಾಮಗಾರಿಗಳನ್ನು ನಡೆಸುವಾಗ ಅಧಿಕಾರಿಗಳು ಆ ಪ್ರದೇಶದಲ್ಲಿ ಯೋಜನೆಯ ಫಲಾನುಭವಿಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ವೈಯಕ್ತಿಕ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಮಾಡುವಾಗ ಸರ್ಕಾರದ ಮಾನದಂಡಗಳನ್ನು ಅನುಸರಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ. ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಮೂಲ ಧ್ಯೇಯಕ್ಕೆ ಅನುಸಾರವಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಯೋಜನೆಯ ಲಾಭ ಒದಗಿಸಿ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಸರಿಯಾಗಿ ಸಾರ್ವಜನಿಕರಿಗೆ ತಿಳಿಸಿ ಮತ್ತು ಆಯಾ ಆರ್ಥಿಕ ವರ್ಷದಲ್ಲಿ ನಿಯಮಾನುಸಾರ ಬಳಕೆ ಮಾಡಿಕೊಳ್ಳಬೇಕು. ಕ್ರಿಯಾ ಯೋಜನೆ ಅನುಮೋದನೆಗೊಂಡ ನಂತರ ಅನಗತ್ಯ ವಿಳಂಬ ಮಾಡುವಂತಿಲ್ಲ. ನಡೆಸಬೇಕಾದ ಕಾಮಗಾರಿ ಮತ್ತು ಯೋಜನೆಯ ಸಮರ್ಕ ಅನುಷ್ಠಾನ ಕುರಿತಂತೆ ರಚನಾತ್ಮಕವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಭೌತಿಕ ಮತ್ತು ಆರ್ಥಿಕ ಪ್ರಗತಿ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕೊಪ್ಪಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಟಿ.ವೈ. ಶೆಟ್ಟೆಪ್ಪನವರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪಿ. ಮಲ್ಲಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಪಿ.ಬಿ. ಹಿರೇಗೌಡರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಪೋಸ್ಟರ್ ಬಿಡುಗಡೆ: ಸಭೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೇಬಿಸ್ ಹುಚ್ಚುನಾಯಿ ರೋಗ ತಡೆಗಟ್ಟುವ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪೂರ್ವಭಾವಿ ಸಭೆ ಕೊಪ್ಪಳ 19: ಸರ್ಕಾರದ ನಿರ್ದೇಶನದನ್ವಯ ಅಕ್ಟೋಬರ್ 7 ರಂದು ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕು ಕೇಂದ್ರಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಬೇಕಾಗಿದ್ದು, ಈ ಬಗ್ಗೆ ಚರ್ಚಿಸಲು ಸೆ.23 ರಂದು ಬೆಳಿಗ್ಗೆ 11 ಗಂಟೆಗೆ ಯಲಬುರ್ಗಾ ತಹಶೀಲ್ದಾರ ಅವರ ಕಾರ್ಯಾಲಯದಲ್ಲಿ ಹಾಗೂ ಸೆ.24 ರಂದು ಮಧ್ಯಾಹ್ನ 3.30 ಗಂಟೆಗೆ ಕುಕನೂರಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಆಯಾ ತಾಲ್ಲೂಕು ತಹಶೀಲ್ದಾರರು ವಹಿಸಿಕೊಳ್ಳವರು. ಈ ಸಭೆಗೆ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಸೆ.25 ರಂದು ಪೂರ್ವಭಾವಿ ಸಭೆ ಕೊಪ್ಪಳ 19 : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಕುರಿತು ಚರ್ಚಿಸಲು ಸೆ.25 ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳಲಿದ್ದು, ಸಭೆಗೆ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ: ಆಕ್ಷೇಪಣೆಗೆ ಆಹ್ವಾನಕೊಪ್ಪಳ 19 : ಕೊಪ್ಪಳ ಜಿಲ್ಲೆಯಲ್ಲಿ ಸ್ಥಗಿತಗೊಂಡ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲು ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಜಿಲ್ಲೆಯ ಕನಕಗಿರಿ ತಾಲ್ಲೂಕಿನ ನವಲಿಯ ವಿಶ್ವಾಸ ಸ್ವಶಕ್ತಿ ಮಹಿಳಾ ಸೌಹಾರ್ದ ಸ್ವ ಸಹಾಯ ಸಹಕಾರಿ ನಿ., ಕುಷ್ಟಗಿ ತಾಲ್ಲೂಕಿನ ಹನುಮಸಾಗರದ ಅನ್ನಪೂರ್ಣೇಶ್ವರಿ ಸ್ವಶಕ್ತಿ ಮಹಿಳಾ ಸೌಹಾರ್ದ ಸ್ವ ಸಹಾಯ ಸಹಕಾರಿ ನಿ., ಕುಕನೂರಿನ ಐಶ್ವರ್ಯ ಸ್ವಶಕ್ತಿ ಮಹಿಳಾ ಸೌಹಾರ್ದ ಸ್ವ ಸಹಾಯ ಸಹಕಾರಿ ನಿ., ಕೊಪ್ಪಳದ ಮಹಾಲಕ್ಷ್ಮೀ ಸ್ವಶಕ್ತಿ ಮಹಿಳಾ ಸೌಹಾರ್ದ ಸ್ವ ಸಹಾಯ ಸಹಕಾರಿ ನಿ., ಕುಕನೂರಿನ ಯಲಬುರ್ಗಾ ತಾಲ್ಲೂಕು ರೆಡ್ಡಿ ನೌಕರರ ಪತ್ತಿನ ಸಹಕಾರಿ ಸಂಘ ನಿ., ಕುಷ್ಟಗಿಯ ಕಾಯಕಲ್ಪ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ., ಸಹಕಾರ ಸಂಘಗಳು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರ ಅಡಿಯಲ್ಲಿ ನೋಂದಣಿಗೊಂಡು ಸಂಘದ ಬೈಲಾ ರೀತ್ಯಾ ಕಾರ್ಯನಿರ್ವಹಿಸದೇ ಸ್ಥಗಿತಗೊಂಡು, ಪ್ರಸ್ತುತ ಸ್ಥಗಿತದಲ್ಲಿರುತ್ತವೆ.
ಈ ಎಲ್ಲಾ ಸ್ಥಗಿತಗೊಂಡ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲು ಹಾಗೂ ಮುಂದೆ ಇವುಗಳನ್ನು ನೋಂದಣಿ ರದ್ದತಿಗೆ ಕ್ರಮವಿಡಲಾಗುತ್ತಿದೆ. ಈ ಬಗ್ಗೆ ಸಹಕಾರ ಸಂಘಗಳ ಸದಸ್ಯರುಗಳಿಗೆ ಮತ್ತು ಸಾರ್ವಜನಿಕರಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಕ್ಷಮ ನಿಬಂಧಕರಿಗೆ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಪ್ರಕಟಗೊಂಡ 15 ದಿನದೊಳಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು ಎಂದು ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 