ಎಲ್ಲೆಡೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ಕಾಳಜಿ ವಹಿಸಿ: ಶಾಸಕ ಮಾನೆ
Ensure that treatment is available everywhere: MLA Mane
ಲೋಕದರ್ಶನ ವರದಿ
ಎಲ್ಲೆಡೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ಕಾಳಜಿ ವಹಿಸಿ: ಶಾಸಕ ಮಾನೆ
ಹಾನಗಲ್ 03: ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕಿನ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೆಲವೆಡೆ ವೈದ್ಯರ ಕೊರತೆಯಿಂದ ಅನಾನುಕೂಲ ಉಂಟಾಗಿದ್ದು, ಲಭ್ಯ ವೈದ್ಯರನ್ನು ಕೊರತೆ ಇರುವ ಸ್ಥಳಗಳಿಗೆ ನಿಯೋಜಿಸಿ ಎಲ್ಲೆಡೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ಕಾಳಜಿ ವಹಿಸಿ ಎಂದು ಡಿಎಚ್‌ಒ ಡಾ.ಜಯಾನಂದ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ತಾಲೂಕಿನ ಆರೋಗ್ಯ ಇಲಾಖೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಡಿಎಚ್‌ಒ, ಟಿಎಚ್‌ಒ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತುರ್ತು ಸಂದರ್ಭದಲ್ಲಿ ಕೆಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಇರದೇ ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೂ ಹೀಗಾಗಬಾರದು. ಸಮಯಪಾಲನೆ, ಕರ್ತವ್ಯ ನಿರ್ವಹಣೆ ಮಾಡದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಿ. ತುರ್ತು ಸಂದರ್ಭದಲ್ಲಿ ಎಲ್ಲ ಕೇಂದ್ರಗಳಲ್ಲಿಯೂ ಸಹ ಪ್ರಾಥಮಿಕ ಚಿಕಿತ್ಸೆ ದೊರಕಿಸಲು ಕಾಳಜಿ ವಹಿಸಿ ಎಂದರು.
ತಾಲೂಕಿನ ಆಯುಷ್ಮಾನ ಆರೋಗ್ಯ ಉಪಕೇಂದ್ರಗಳಲ್ಲಿ ಸುರಕ್ಷಾಧಿಕಾರಿಗಳ ಕೊರತೆಯಾಗದಂತೆ ಕ್ರಮ ವಹಿಸಿ. ಈಗಾಗಲೇ ವರ್ಗಾವಣೆ ಮತ್ತು ನಿವೃತ್ತಿಯಿಂದ ತೆರವಾಗಿರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಖಾಲಿ ಪಟ್ಟಿ ತಯಾರಿಸಿಕೊಂಡು ಆದ್ಯತೆ ಮೇರೆಗೆ ವೈದ್ಯರನ್ನು ನಿಯೋಜಿಸಬೇಕು. ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಮತ್ತು ವಾಹನ ಚಾಲಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅವಶ್ಯಕತೆಗೆ ತಕ್ಕಂತೆ ಸಿಬ್ಬಂದಿ ಸೇವೆ ಪಡೆಯಲು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು. ಟಿಎಚ್‌ಒ ಡಾ.ಲಿಂಗರಾಜ ಕೆ.ಜಿ. ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 