ವಿಶೇಷಚೇತನ ಮಕ್ಕಳು ಸಮಾನ ಶಿಕ್ಷಣ, ಸಮಾನ ಅವಕಾಶ ಹಾಗೂ ಗೌರವಯುತ ಬದುಕು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ
Ensuring equal education, equal opportunities, and a life of dignity for children with special needs
ವಿಜಯಪುರ 27: ವಿಶೇಷಚೇತನ ಮಕ್ಕಳು ನಮ್ಮ ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಅವರಿಗೂ ಎಲ್ಲ ಮಕ್ಕಳಂತೆ ಸಮಾನ ಶಿಕ್ಷಣ, ಸಮಾನ ಅವಕಾಶ ಹಾಗೂ ಗೌರವಯುತ ಬದುಕು ದೊರೆಯುವಂತೆ ಮಾಡುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಇಂದು ನಗರದ ಪ್ರಕೃತಿ ಕಾಲನಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಸಂಭವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಪ್ರಾರಂಭಿಸಲಾಗಿರುವ ಬಿ.ಎಲ್.ಡಿ.ಇ- ರಘುಕುಲ ಸಮನ್ವಯ ಶಾಲೆ ಉದ್ಟಾಟಿಸಿ ಅವರು ಮಾತನಾಡಿದರು. ವಿಶೇಷಚೇತನ ಮಕ್ಕಳ ಸಬಲೀಕರಣಕ್ಕೆ ಸಮರ್ಕ ಹೆಜ್ಜೆಯಾಗಿ ಬಿ.ಎಲ್.ಡಿ.ಇ-ರಘುಕುಲ ಸಮನ್ವಯ ಶಾಲೆ ಪ್ರಾರಂಭಿಸಲಾಗಿದೆ. ಪ್ರತಿಯೊಂದು ವಿಶೇಷಚೇತನ ಮಗುವಿನ ಕನಸಿಗೆ ರೆಕ್ಕೆ ನೀಡಿ ಅವರಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವದಿಂದ ಬದುಕಲು ಅವಕಾಶ ಕಲ್ಪಿಸುವ ಶಿಕ್ಷಣ ಕೇಂದ್ರವಾಗಿ ಈ ಶಾಲೆ ರೂಪುಗೊಳ್ಳಲಿದೆ.
ಇದು ರಾಷ್ಟ್ರಕ್ಕೆ ಮಾದರಿಯಾಗುವ ವಿಶ್ವಾಸವಿದೆ. ಇಲ್ಲಿರುವ ಆಧುನಿಕ ವಿಶಾಲ ಕಟ್ಟಡ, ಸಕಲ ಸೌಕರ್ಯಗಳನ್ನು ಹೊಂದಿರುವ ಕೊಠಡಿಗಳು, ಬೋಧಕ ಮತ್ತು ಆರೈಕೆ ಸಿಬ್ಬಂದಿಯ ನಿಸ್ವಾರ್ಥ ಸೇವೆ ವಿಶೇಷಚೇತನ ಮಕ್ಕಳ ಅಭಿವೃದ್ಧಿಗೆ ಪೂರಕವಾಗಿವೆ. ಬಿ.ಎಲ್.ಡಿ.ಇ ಸಂಸ್ಥೆಯ ಮೆಡಿಕಲ್ ಕಾಲೇಜಿನಿಂದ ಇಲ್ಲಿನ ಮಕ್ಕಳಿಗೆ ಎಲ್ಲ ರೀತಿಯ ಚಿಕಿತ್ಸೆಗೆ ನೆರವು ನೀಡಲಾಗುವುದು. ಇಂಥ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾದಂತೆ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಲಾವುದು. ಇಂಥ ಮಕ್ಕಳಿಗೆ ನಾವು ಸೇವೆ ಮಾಡಿದರೆ ನಮ್ಮ ಮಕ್ಕಳಿಗೂ ಪುಣ್ಯ ಬರುತ್ತದೆ. ಎಲ್ಲರೂ ಸೇರಿ ಕೆಲಸ ಮಾಡಿ ಬೇರೆ ಜಿಲ್ಲೆ ಮತ್ತು ತಾಲೂಕುಗಳಿಗೆ ಈ ಶಾಲೆ ಪ್ರೇರಣೆಯಾಗಿ ನಿಲ್ಲಬೇಕು. ಎಲ್ಲೆಡೆ ಇಂಥ ಶಾಲೆಗಳು ಆರಂಭವಾಗಿ ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಯಾಗಬೇಕು.
ನಾನು ತಿಂಗಳಿಗೆ ಒಮ್ಮೆಯಾದರೂ ಇಲ್ಲಿಗೆ ಭೇಟಿ ನೀಡುತ್ತೇನೆ ಎಂದು ಅವರು ಹೇಳಿದರು. ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನಿಲಗೌಡ ಪಾಟೀಲ ಮಾತನಾಡಿ, ಬಸವ ನಾಡಿನಲ್ಲಿ ಇದು ಅಪರೂಪದ ಶಾಲೆಯಾಗಿದೆ. ವಿಶೇಷ ಚೇತನ ಮಕ್ಕಳನ್ನು ಸಾಕಿ ಸಲಹುವುದು ಮತ್ತು ಅವರಿಗೆ ಕಲಿಸುವುದು ಸವಾಲಿನ ಕೆಲಸವಾಗಿದೆ. ಅಂಥ ಮಕ್ಕಳಿಗೆ ಈ ಶಾಲೆ ಸಂಜೀವಿನಿಯಾಗಿದೆ ಎಂದು ಹೇಳಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 