ಮೇ 16 ರಂದು ಪ್ರವೇಶ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
Entrance exam on May 16; prohibitory orders imposed around exam centers
ಲೋಕದರ್ಶನ ವರದಿ
ಬಳ್ಳಾರಿ,ಮೇ 16: ನಗರದ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯು ಮೇ 16ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಸಮಯ ಮತ್ತು ಕೇಂದ್ರಗಳು:
ಮೇ 16 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು.
ಸುಗಮ ಹಾಗೂ ಪಾರದರ್ಶಕ ಪರೀಕ್ಷಾ ನಿರ್ವಹಣೆಗಾಗಿ, ನಿಗದಿಪಡಿತ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ‘ನಿಷೇಧಿತ ಪ್ರದೇಶ' ಎಂದು ಘೋಷಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಹಾಗೂ ಇಂಟರ್ನೆಟ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಕಟ್ಟುನಿಟ್ಟಿನ ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರದ ಆವರಣದೊಳಗೆ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಪ್ರವೇಶಿಸುವುದನ್ನು ಸಹ ಕಡ್ಡಾಯವಾಗಿ ನಿಷೇಧಿಸಲಾಗಿದೆ. ನಿಷೇಧಾಜ್ಞೆಯು ಪರೀಕ್ಷಾ ಮೇಲ್ವಿಚಾರಣೆ ಹಾಗೂ ಕರ್ತವ್ಯದಲ್ಲಿ ನಿರತರಾಗಿರುವ ಸರ್ಕಾರಿ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 