ಉದ್ಯಮಶೀಲತಾ ತಿಳುವಳಿಕೆ ಶಿಬಿರ
Entrepreneurship Awareness Camp
ಕಾರವಾರ 18: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಡಾಕ್ ಕಾರವಾರ, ಲೊಯೋಲ ವಿಕಾಸ ಕೇಂದ್ರ ಮುಂಡಗೋಡ ಹಾಗೂ ಸಿಸಿಎಫ್ ಲೊಯೋಲ ಜನಸ್ಫೂರ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಮುಂಡಗೋಡ ಲೊಯೋಲಾ ತರಬೇತಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬೆಂಗಳೂರು ಆಶೀರ್ವಾದ ಸಂಸ್ಥೆಯ ನಿರ್ದೇಶಕ ಫಾದರ್ ಅರುಣ್ ಲೂಯಿಸ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಯಂ ಉದ್ಯೋಗವನ್ನು ಮಾಡಲು ಮನಸ್ಸು ಮಾಡಿ, ಮುಂದೆ ಬಂದು ಸರ್ಕಾರ ಯೋಜನೆಗಳ ಪ್ರಯೋಜನನ್ನು ಪಡೆದುಕೊಂಡು ಸ್ವಯಂ ಉದ್ಯೋಗಿಗಳಾಗಿ ಎಂದು ಕರೆ ನೀಡಿದರು.
ಲೊಯೋಲಾ ವಿಕಾಸ ಕೇಂದ್ರದ ನಿರ್ದೇಶಕ ಫಾದರ್ ಅನಿಲ್ ಡಿಸೋಜಾ ಮಾತನಾಡಿ, ಒಂದು ಕೆಲಸವನ್ನು ಕೈಗೆತ್ತಿಕೊಂಡರೆ ಅದು ಪೂರ್ಣಗೊಳ್ಳುವವರೆಗು ಅದನ್ನು ಛಲ ಬಿಡದೆ ಮಾಡಿ ಮುಗಿಸಬೇಕು. ಅದೇ ರೀತಿ ಒಂದು ಉದ್ಯಮದಲ್ಲಿ ಲಾಭ ನಷ್ಟಗಳಾಗಲಿ ಅದನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಲು ಪ್ರಯತ್ನಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿಡಾಕ್ ಕಾರವಾರದ ತರಬೇತದಾರ ಶಿವರಾಜಕುಮಾರ ಹೆಳವಿ, ಸರೋಜ ಚವ್ಹಾಣ, ವಿನಾಯಕ ಮತ್ತು ಸುಧೀರ, ಎನ್.ಆರ್.ಎಲ್.ಎಮ್ ಸಿಬ್ಬಂದಿಗಳು, ಮುಂಡಗೋಡ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಜಗದೀಶ ಯಲಿಗಾರ, ಮುರಳಿಧರ ದೇಶಪಾಂಡೆ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮನ್ನು ಮಲ್ಲಮ್ಮ ನೀರಲಗಿ ನಿರೂಪಿಸಿದರು. ಮಂಗಳಾ ಮೋರೆ ಸ್ವಾಗತಿಸಿದರು. ನಕ್ಲೂಬಾಯಿ ಕೊಕರೆ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 