ನರೇಗಾ ಕಾಮಗಾರಿ ಸ್ಥಳದಲ್ಲಿ ಪರಿಸರ ದಿನಾಚರಣೆ
Environment Day celebrated at NREGA work site
ಲೋಕದರ್ಶನ ವರದಿ
ಹೂವಿನಹಡಗಲಿ 06: ನರೇಗಾ ಯೋಜನೆಯು ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೇ ಹಸಿರು ಕ್ರಾಂತಿಗೆ ಪೂರಕವಾಗಿ ಗ್ರಾಮೀಣ ಭಾಗದಲ್ಲಿ ಸಮತೋಲನ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಗ್ರಾ.ಪಂ.ಮಾಜಿ ಸದಸ್ಯ ರುದ್ರಗೌಡ ಹೇಳಿದರು.ತಾಲ್ಲೂಕಿನ ಹೊಳಗುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ನರೇಗಾ ಕಾಮಗಾರಿ ಸ್ಥಳದಲ್ಲೇ ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿ ಮಾತನಾಡಿದರು.ಪ್ರತಿದಿನ ಕೇವಲ ಶ್ರಮದಾನಕ್ಕೆಸೀಮಿತವಾಗದೇ ನರೇಗಾ ಕೂಲಿ ಕಾರ್ಮಿಕರು, ಇಂದು ಪರಿಸರ ಉಳಿಸುವ ನಿಟ್ಟಿನಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಹೊತ್ತುಕೊಂಡಿದ್ದು ಜವಾಬ್ದಾರಿಯನ್ನು ಮಹತ್ವದ ನಿರ್ಧಾರವಾಗಿದ್ದು, ಅವುಗಳನ್ನು ಮಕ್ಕಳಂತೆ ಪೋಷಿಸಬೇಕು ಎಂದರು.ನರೇಗಾ ಕಾಮಗಾರಿ ಸ್ಥಳದಲ್ಲಿ ಹಾಗೂ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದ ಸುತ್ತಮುತ್ತ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅದ್ಯಕ್ಷ ದಡಾರ್ಪ ಮತ್ತು ಭಾಷಾ ಸಾಹೇಬ್ ಗ್ರಾಮ ಪಂಚಾಯತಿ ಸಿಬ್ಬಂದಿ, ಕಾಯಕ ಬಂಧು ಹಾಗೂ ನರೇಗಾ ಕೂಲಿಕಾರ್ಮಿಕರು ಹಾಜರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 