ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಮೀನಾಕ್ಷಿ ಬಣ್ಣದಭಾವಿ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಮೀನಾಕ್ಷಿ ಬಣ್ಣದಭಾವಿ  Environmental conservation is everyone's responsibility: Meenakshi Bannadabhavi

ಕೊಪ್ಪಳ, ಸೆ. 29: ಎಲ್ಲ ರೋಗಗಳ ಮೂಲ ಸ್ವಚ್ಛತೆಯಲ್ಲಿದೆ. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದಭಾವಿ ಹೇಳಿದರು.  

ಕೊಪ್ಪಳ ಇನ್ನರ್ ವೀಲ್ ಕ್ಲಬ್ 316ರ ಆವರಣದಲ್ಲಿ ‘ಕ್ಲೀನ್ ಆ್ಯಂಡ್ ಗ್ರೀನ್ ಕ್ಯಾಂಪಸ್‌’ ಶೀರ್ಷಿಕೆಯಡಿ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಸ್ವಚ್ಛತೆ ಕಾಪಾಡುವುದರ ಜೊತೆಗೆ ನೀರು ಹಾಗೂ ಜೀವಜಲ ಅಮೂಲ್ಯವಾಗಿದ್ದು, ಅದನ್ನು ಮಿತವಾಗಿ ಬಳಸಬೇಕು. ರೋಗಗಳಿಂದ ರಕ್ಷಣೆ ಪಡೆಯಲು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.  

ನೈರ್ಮಲ್ಯ, ಪರಿಸರ ಸಂರಕ್ಷಣೆ ಹಾಗೂ ಸಮುದಾಯದ ಜವಾಬ್ದಾರಿಯನ್ನು ಸಾರುವ ‘ಗ್ರೋ ಆ್ಯಂಡ್ ಫ್ಲರಿಶ್‌’ ಧ್ಯೇಯದಡಿ ಸ್ನೇಹ ಮತ್ತು ಸೇವೆಯ ಸಂಕೇತವಾಗಿ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಮೀನಾಕ್ಷಿ ಬಣ್ಣದಭಾವಿ ತಿಳಿಸಿದರು.  

ಕಾರ್ಯಕ್ರಮದಲ್ಲಿ ಕ್ಲಬ್ ಕಾರ್ಯದರ್ಶಿ ಶ್ರೀದೇವಿ ಪಾಟೀಲ್, ಎಡಿಟರ್ ಮಾಲಾ ಎಸ್‌. ಕಂಚಿ, ಐಎಸ್‌ಒ ಲತಾ ಪಟ್ಟಣಶೆಟ್ಟಿ, ಸದಸ್ಯರಾದ ಪಾರ್ವತಿ ಪಾಟೀಲ್, ಶಾರದಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.