ಪರಿಸರ ಸಂರಕ್ಷಣೆ ಜಾಗೃತಿ ಅಗತ್ಯ: ಡಾ.ಟಿ.ಗಂಗಾಧರ ಗೌಡ
Environmental protection awareness is necessary: Dr. T. Gangadhara Gowda
ಬಳ್ಳಾರಿ 11: ಪ್ರಸ್ತುತದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಬದ್ಧ ಪ್ರಯತ್ನವಾಗಬೇಕಿದೆ ಎಂದು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಹೇಳಿದರು.
ಕೆಎಸ್‌ಸಿಎಎಸ್‌ಐ ಬಳ್ಳಾರಿ ಶಾಖೆ ವತಿಯಿಂದ ರಾಷ್ಟ್ರೀಯ ಶಸ್ತ್ರಚಿಕಿತ್ಸಕ ವಾರಾಚರಣೆ ಅಂಗವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರೂಣಿಸಿ ಬಳಿಕ ಅವರು ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ಸುತ್ತ-ಮುತ್ತಲಿನ ಪರಿಸರ ರಕ್ಷಣೆ ಮಾಡುವ ಕಾಳಜಿ ವಹಿಸುವ ಮೂಲಕ ಪರಿಸರ ಹಾನಿ ಮಾಡದಂತೆ ನೋಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ಅಧೀಕ್ಷಕರಾದ ಡಾ.ಇಂಧುಮತಿ, ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಕಾಸಾ ಸೋಮಶೇಖರ್, ಎಎಸ್‌ಐ ರಾಷ್ಟ್ರೀಯ ಕಾರ್ಯದರ್ಶಿ ಡಾ.ದಿವಾಕರ ರೆಡ್ಡಿ, ಖಜಾಂಚಿ ಡಾ.ವೈ.ಗುರುಬಸವನ ಗೌಡ, ಶಾಖಾ ಅಧ್ಯಕ್ಷ ಡಾ.ಶೇಖಪ್ಪ ಮಾಳಗಿಮನಿ, ನಗರದ ಹಿರಿಯ ವೈದ್ಯರುಗಳಾದ ಡಾ.ಸೋಮೇಶ್ವರ ಗಡ್ಡಿ, ಡಾ.ಅರುಣ್ ಎಸ್.ಕೆ., ಡಾ.ಅರುಣಾ ಕಾಮಿನೇನಿ, ಡಾ.ಅರವಿಂದ್ ಪಾಟೀಲ್ ಸೇರಿದಂತೆ ಜಿಲ್ಲಾ ಶಾಖೆಯ ಸದಸ್ಯರು, ಕೇಂದ್ರದ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 