ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಯರಗೊಪ್ಪ
ಹಾವೇರಿ 01: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅಳಿವಿನಂಚಿನಲ್ಲಿರುವ ಕಾಡುಗಳನ್ನು ರಕ್ಷಿಸಿ ಪ್ರತಿಯೊಬ್ಬರೂ ಭವಿಷ್ಯದ ಚಿಂತನೆಯಲ್ಲಿ ಇಂದಿನಿಂದಲೇ ಸಸಿ ನೆಟ್ಟು ಪರಿಸರ ಜಾಗೃತಿಯನ್ನುಂಟು ಮಾಡಬೇಕು. ಮನೆಗೊಂದು ಮರ, ವ್ಯಕ್ತಿಗೊಂದು ಸಸಿ ಜಗವೆಲ್ಲ ಖುಷಿ ಎಂಬುದನ್ನು ಎಲ್ಲರೂ ಅಳವಡಿಸಿಕೊಂಡಾಗ ಪ್ರಕೃತಿ ಸಮತೋಲನ ಕಾಯ್ದುಕೊಳ್ಳಬಹುದು. ಪ್ಲಾಸ್ಟಿಕ್ ಮುಕ್ತ ಭಾರತವನ್ನಾಗಿಸಲು ಯುವಕರು ಮತ್ತು ಪ್ರಜ್ಞಾವಂತರು ಎಲ್ಲಾ ಹಂತಗಳಲ್ಲಿ ಪರಿಸರ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದು ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದ ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ ಮಾತನಾಡಿದರು.
ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ., ಎನ್. ಎಸ್. ಎಸ್., ಇಕೋ ಕ್ಲಬ್ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಪ್ರಾಚಾರ್ಯ ಪ್ರೊ. ಜೆ. ಆರ್. ಸಿಂಧೆ, ಪ್ರೊ. ದೀಪಕ ಕೊಲ್ಲಾಪುರೆ, ಡಾ|| ಜಗದೀಶ ಹೊಸಮನಿ, ಡಾ|| ಎಂ. ಪಿ. ಕಣವಿ, ಡಾ|| ಈ. ಬಿ. ಸೇಡಂಕರ, ಪ್ರೊ. ಬಿ. ಮಲ್ಲಿಕಾಜರ್ುನಪ್ಪ, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಲೋಕಾಪುರ, ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಹಾಗೂ ವಿದ್ಯಾಥರ್ಿ-ವಿದ್ಯಾಥರ್ಿನಿಯರು ಪಾಲ್ಗೊಂಡು ಪರಿಸರ ಜಾಗೃತಿ ಪ್ರಮಾಣವಚನ ಸ್ವೀಕರಿಸಿ, ಸಸಿಗಳನ್ನು ನೆಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 