ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಪಟೇಲ್
Environmental protection is everyone's responsibility - Patel
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಪಟೇಲ್
ಕೊಪ್ಪಳ 05: ಸಕಲ ಜೀವ ರಾಶಿಯನ್ನು ಪೋಷಿಸುವ ಪ್ರಕೃತಿಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಅದರಿಂದ ನಾವುಗಳು ವಿಮುಖ ರಾಗದಿರೋಣ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು,
ಅವರು ಗುರುವಾರ ಜಿಲ್ಲಾ ಆಡಳಿತ ಜಿಲ್ಲಾ ನಗರ ಅಭಿವೃದ್ಧಿ ಕೋಶ ಹಾಗೂ ನಗರಸಭೆ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರಿ್ಡಸಿದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏಕ್ ಪೇಡ್ ಮಾಕೆ ನಾಮ್ ಎಂಬ ಘೋಷ ವಾಕ್ಯ ದ ಅಡಿಯಲ್ಲಿ ಏರಿ್ಡಸಿದ ಸಮಾರಂಭ ದಲ್ಲಿ ಪಾಲ್ಗೊಂಡು ಸಸಿನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದವರು ,
ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಕೂಡ ನಮ್ಮ ಜವಾಬ್ದಾರಿ ಇದರ ಬಗ್ಗೆ ಕಾಳಜಿ ವಹಿಸಿ ಶ್ರಮಿಸಬೇಕು ಎಂದ ಅವರು ಪ್ರತಿಯೊಬ್ಬರು ತಮ್ಮ ಮನೆ ಮುಂದೆ ಒಂದೊಂದು ಗಿಡಮರ ಬೆಳೆಸಬೇಕು ತಮ್ಮ ಮನೆಯ ಮುಂದಿನ ಪರಿಸರವನ್ನು ಸ್ವಚ್ಛವಾಗಿಡಬೇಕು ಎಂದರು ಮುಂದುವರೆದು ಮಾತನಾಡಿ ಎಲ್ಲಾ ರೋಗಗಳ ಮೂಲ ಅ ಸ್ವಚ್ಛತೆಯಾಗಿದ್ದು ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯ ನಡೆಯಬೇಕು ಇಂಥ ಕಾರ್ಯಗಳಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಇಂದು ನಡೆಯುತ್ತಿರುವ ವಿಶ್ವ ಪರಿಸರ ದಿನಾಚರಣೆ. ನಿಮಿತ್ಯ ನಾವುಗಳು ಗಿಡ ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಿಸಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಪಟೇಲ್ ಅಭಿಪ್ರಾಯಪಟ್ಟರು,
ಕಾರ್ಯಕ್ರಮದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಭರತ್ ಗದುಗಿನ ಮಠ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಸಯ್ಯಸ್ವಾಮಿ ಹಿರೇಮಠ್ ಸದಸ್ಯರಾದ ಅಕ್ಬರ್ ಪಾಷಾ ಪಲ್ಟನ್ ಆಶ್ರಯ ಕಮಿಟಿ ಸದಸ್ಯರಾದ ಪರಶುರಾಮ್ ಕೆರೆಹಳ್ಳಿ ಮಹಿಳಾ ಸದಸ್ಯರಾದ ಪದ್ಮಾವತಿ ಕಾಂಬಳೆ ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಮಧುರ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಹಮದ್ ಹುಸೇನ್ ನಗರ ಸಭೆ ಪರಿಸರ ಇಲಾಖೆಯ ಜಯಶೀಲ, ಸಲೀಂ ಡಫೆದಾರ್ ಅಲ್ಲದೆ ಮೆಹಬೂಬ್ ಅರಗಂಜಿ ಸೇರಿದಂತೆ ಸ್ವ ಸಹಾಯ ಗುಂಪಿನ ಮಹಿಳಾ ಪದಾಧಿಕಾರಿಗಳು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 