ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ದಾವಲ್ ತಾಳಿಕೋಟಿ
Environmental protection is everyone's responsibility: Daval Talikoti
ಗಜೇಂದ್ರಗಡ 05: ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೇಳಿದರು.
ನಗರದ ಈದ್ಗಾ ಮೈದಾನದ ಆವರಣದಲ್ಲಿ ವಿಶ್ವ ಪರಿಸರದ ನಿಮಿತ್ತ ಸಸಿ ನೆಟ್ಟು ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ ಮಹತ್ವ ಕೊಡುವ ಅತ್ಯಗತ್ಯವಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು. ಪರಿಸರ ರಕ್ಷಣೆ ನಮ್ಮೆಲ್ಲರ ಜಬಾಬ್ದಾರಿ. ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ಭೂಮಿಗೆ ಬಹಳಷ್ಟು ಹಾನಿಯಾಗಲಿದೆ ಎಂದರು.
ಅಂಜುಮನ್ ಇಸ್ಲಾಂ ಕಮೀಟಿಯ ಚೇರ್ಮನ್ ಹಸನಸಾಬ ತಟಗಾರ ಮಾತನಾಡಿ ಸಮಾಜ ಬೆಳೆದಂತೆಲ್ಲ ಪರಿಸರ ಕಾಳಜಿ ಮರೆತಿದೆ. ಇದರಿಂದ ನಾವೆಲ್ಲ ಇಲ್ಲದ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದೇವೆ.
ಈ ಬಗ್ಗೆ ತಕ್ಷಣ ಜಾಗತರಾಗದಿದ್ದರೆ ಭವಿಷ್ಯದಲ್ಲಿ ಕೆಡಕು ಕಾದಿದೆ. ಪರಿಸರ ನಾಶದಿಂದಲೇ ಇಂದು ಪ್ರಕತಿಯಲ್ಲಿ ಏರು ಪೇರುಗಳಾಗಿವೆ. ಮುಂಬರುವ ದಿನಗಳಲ್ಲಿ ಜನರು ಹೆಚ್ಚೆಚ್ಚು ಗಿಡ ಬೆಳೆಸಿ ಪರಿಸರದಲ್ಲಿ ಸಮತೋಲನ ಕಾಯ್ದು ಕೊಂಡು ವಿಶ್ವವನ್ನು ರಕ್ಷಿಸಬೇಕಾಗಿದೆ ಎಂದು ಸಲಹೆ ನೀಡಿದರು.
ಈ ವೇಳೆ ಅಂಜುಮನ್ ಇಸ್ಲಾಂ ಕಮೀಟಿ ನಿರ್ದೇಶಕರಾದ ಎ.ಕೆ.ಕಾತರಕಿ, ನಾಸೀರ ಸುರಪೂರ, ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 