ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಡಾ.ಕಿರಣಕುಮಾರ ಮುತ್ನಾಳಿ
Environmental protection is everyone's responsibility: Dr. Kiran Kumar Muthnali
ಲೋಕದರ್ಶನ ವರದಿ
ಬೆಳಗಾವಿ 05 : ಹಸಿರು ನಾಳೆಗಾಗಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕೆಎಲ್ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಕಿರಣಕುಮಾರ ಮುತ್ನಾಳಿ ಹೇಳಿದರು.
ಅವರು ಇಂದು ಚಿಕ್ಕೋಡಿಯ ಕೆಎಲ್ಇ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಗಿಡ ನೆಡುವ ಮತ್ತು ಅವುಗಳನ್ನು ಪೋಷಿಸುವ ಪ್ರತಿಜ್ಞೆ ಬೋಧಿಸಲಾಯಿತು. ಪ್ಲಾಸ್ಟಿಕ್ ಮುಕ್ತ ಜೀವನ, ಜಲ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ, ಇಂಧನ ಹಾಗೂ ವಿದ್ಯುತ್ ಉಳಿತಾಯ ಮತ್ತು ಪರಿಸರ ಸ್ನೇಹಿ ಜೀವನಶೈಲಿಯ ಮಹತ್ವದ ಕುರಿತು ಹೇಳಿದರು.
ಕಾರ್ಯಕ್ರಮದಲ್ಲಿ ಡಾ.ಸುಜಾತಾ ಬರಮೊಜಿ, ಡಾ.ಸುಧೀಂದ್ರ ಹೊನ್ನವಾಡ, ಡಾ.ರವಿ ಮಡಿವಾಳರ, ಡಾ. ಬಸವರಾಜ ಬನ್ನನವರ, ಮಹಾಂತೇಶ ಗುಡ್ನವರ ಮತ್ತು ಚಿಕ್ಕೋಡಿ ಕೆಎಲ್ಇ ಅಂಗ ಸಂಸ್ಥೆಗಳ ಪ್ರಾಚಾರ್ಯರಾದ ಡಾ. ಬಿ ಜಿ ಕುಲಕರ್ಣಿ, ಸುಧೀರ ಕೋಟಿವಾಲೆ, ಪ್ರಕಾಶ ಕೋಳಿ, ರೂಪಾಲಿ ಪಾಟೀಲ್, ಡಾ. ವಿವೇಕ ಖೋತ್, ಉಪನ್ಯಾಸಕರು, ವೈದ್ಯರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣದಲ್ಲಿ ಸುಮಾರು 300 ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 