ಇಂದಿನ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಶಿಕ್ಷಣ ಜಾರಿಯಾಗಬೇಕು: ಮಾರುತಿ ತಳವಾರ
Equal education for all must be implemented in the current system: Maruti Talwar
ರಾಣೇಬೆನ್ನೂರು, ಆ.30: ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿರುವ ಹಲವು ವೈಪರೀತ್ಯಗಳನ್ನು ನಿವಾರಿಸಿ, ಎಲ್ಲರಿಗೂ ಸಮಾನ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಯುವಕವಿ ಮಾರುತಿ ತಳವಾರ ಹೇಳಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶುಕ್ರವಾರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಆಯೋಜಿಸಿದ್ದ 10ನೇ ವಿದ್ಯಾರ್ಥಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಶಿಕ್ಷಣ ವ್ಯವಸ್ಥೆ ಹಲವು ವೈರುಧ್ಯಗಳು ಮತ್ತು ವೈಪರೀತ್ಯಗಳಿಂದ ಕೂಡಿದೆ. ಇಂತಹ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದವರಿಗೂ ಸಮಾನ ಶಿಕ್ಷಣ ಜಾರಿಯಾಗಬೇಕು. ನಮ್ಮನ್ನು ಆಳುವ ಸರ್ಕಾರಗಳು ಈ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.
ಸಮಾನತೆ ಎಂಬುದು ಕಾಲೇಜುಗಳಲ್ಲಿಯೂ ಕಾಣಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಸ್ಎಫ್ಐ ಸಂಘಟನೆ ತನ್ನ ವೈಚಾರಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಬೆಳೆಸಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಯಾವುದೇ ಸಂಘಟನೆಗಳು ಪ್ರಬಲ ಹೋರಾಟಗಳನ್ನು ನಡೆಸಿದರೂ, ಅವುಗಳ ಫಲಿತಾಂಶ ಮಾತ್ರ ಪೂರ್ಣ ಪ್ರಮಾಣದಲ್ಲಿ ದೊರೆಯದಿರುವುದು ವಿಷಾದನೀಯ. ವಿದ್ಯಾರ್ಥಿ ಸಮುದಾಯ ತನ್ನ ನ್ಯಾಯಸಮ್ಮತ ಹಾಗೂ ಶೈಕ್ಷಣಿಕ ಸಮಾನತೆಗಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ ಹಾಗೂ ಅನಿವಾರ್ಯವಾಗಿದೆ ಎಂದು ಮಾರುತಿ ತಳವಾರ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 