ಕೊಪ್ಪಳ 06: ಕ್ಷಯ ರೋಗವು ಸಾಂಕ್ರಾಮಿಕ ರೋಗವಾಗಿದು,್ದ ಈ ಕಾಯಿಲೆಯು ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಬೇಕು ಮತ್ತು ಹೊಸ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಂಡು ಕ್ಷಯರೋಗವನ್ನು ಶೀಘ್ರವಾಗಿ ಸಮಾಜದಿಂದ ನಿರ್ಮೂಲನೆ ಮಾಡಬೇಕು ಎಂದು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ವಿಜಯನಾಥ ಇಟಗಿ ಹೇಳಿದರು.
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಿಮ್ಸ್ ಮತ್ತು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಇಲಾಖೆ ವತಿಯಿಂದ ಮಾ. 5 ರಂದು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಬಗ್ಗೆ ಹೊಸ ಬದಲಾವಣೆಗಳ ಕುರಿತಾದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜು ಮಾತನಾಡಿ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (ಎನ್ಟಿಇಪಿ)ದ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರಾದ ಡಾ. ಶಾಜಿಯಾ ಕ್ಷಯ ರೋಗದ ಚಿಕಿತ್ಸೆಯಲ್ಲಿ ಇತ್ತೀಚಿನ ಹೊಸ ಬದಲಾವಣೆಗಳ ಬಗ್ಗೆ ಉಪನ್ಯಾಸ ನೀಡಿದರು.ರಾಜ್ಯ ಕ್ಷಯ ರೋಗ ನಿಯಂತ್ರಣ ಒಕ್ಕೂಟದ ಅಧ್ಯಕ್ಷರಾದ ಡಾ. ಬಾಲು ಗಾಳಿಯ ಮುಖಾಂತರ ಹರಡುವಂತಹ ಕಾಯಿಲೆಗಳ ಬಗ್ಗೆ ಉಪನ್ಯಾಸ ನೀಡಿದರು.
ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಎಂ.ಜಿ. ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಕ್ಷಯ ರೋಗದ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಚೇತನಾ ಕೆ.ವಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಿಮ್ಸ್ನ ಪ್ರಾಂಶುಪಾಲರಾದ ಡಾ.ರಾಘವೇಂದ್ರ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಎಸ್.ಬಿ.ದಾನರೆಡ್ಡಿ, ಮುಖ್ಯ ಆಡಳಿತಾಧಿಕಾರಿ ವೀರಣ್ಣ ಕಮತರ, ಆರ್ಥಿಕ ಸಲಹೆಗಾರರಾದ ಮಲ್ಲಿಕಾಜರ್ುನಗೌಡ ಪಾಟೀಲ್, ಕುಷ್ಟಗಿಯ ರೋಗನಿದಾನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅನಿರುದ್ಧ್, ಕ್ಷಯರೋಗ ವಿಭಾಗದ ಸೀನಿಯರ್ ರೆಸಿಡೆಂಟ್ ಡಾ. ಸಲೀಮ್, ಬೋಧಕ ಸಿಬ್ಬಂದಿ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.