ಗ್ರಾಮದ ಒಂದು ಕಲ್ಲು ಅಲುಗಾಡಲು ಸಹ ವಿ.ಎ.ಗಳು ಬೇಕು: ಚಂದ್ರಶೇಖರ ಕಂಬಾರ

ಕಾರವಾರದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಧರಣಿ* ಜಿಲ್ಲೆಯ 337 ವಿಲೇಜ್ ಆಕೌಂಟ್‌ಗಳು ಭಾಗಿ

ಕಾರವಾರ 27: ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ, ಯಾವುದೇ ಸೌಕರ್ಯಗಳನ್ನು ನೀಡದ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯ 337 ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕರ್ತವ್ಯವವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಧರಣಿ ಪ್ರಾರಂಭಿಸಿದರು. 

ಗ್ರಾಮ ಆಡಳಿತಾಧಿಕಾರಿಗಳ ಉತ್ತರ ಕನ್ನಡ ಜಿಲ್ಲಾ ಸಂಘದ ಅಧ್ಯಕ್ಷ ಚಂದ್ರಶೇಖರ ಕಂಬಾರ ಗ್ರಾಮ ಆಡಳಿತಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದಲ್ಲಿ ಒಂದು ಕಲ್ಲು ಅಲ್ಲಾಡಬೇಕಾದರೆ ವಿ.ಎ.ಗಳು ಬೇಕು. ವಿಲೇಜ್ ಆಕೌಂಟೆಂಟ್ ಮೇಲೆ ಕಂದಾಯ ಇಲಾಖೆ ನಿಂತಿದೆ. ಆದರೆ ನಾವು ಮಲತಾಯಿ ಮಕ್ಕಳಂತೆ ಇದ್ದೇವೆ. ನಮ್ಮನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಕೆಲಸದ ಒತ್ತಡ ಹೆಚ್ಚಿದೆ ಎಂದು ಆರೋಪಿಸಿದರು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ, ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಆರಂಭವಾಗಿದ್ದು, ನಮ್ಮ ಬೇಡಿಕೆಯನ್ನು ಕಂದಾಯ ಸಚಿವರು ಈಡೇರಿಸಬೇಕು ಎಂದರು.ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವಂತೆ ಅವರು ಒತ್ತಾಯಿಸಿದರು. ಧರಣಿ ನಿರತರಾದ ನಾವು ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ಧಿಪಡಿಸಿರುವ ವೆಬ್, ಮೊಬೈಲ್‌ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡುವಂತೆ ವಿಲೇಜ್ ಆಕೌಂಟೆಂಟ್ ಕೊಟ್ರೇಶ್ ಸರಕಾರವನ್ನು ಒತ್ತಾಯಿಸಿದರು.ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮೆರಾ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ (12ಜಿಬಿ/256ಜಿಬಿ), ಸಿಯುಜಿ ಸಿಮ್ ಮತ್ತು ಡೇಟಾಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್ ಪ್ರಿಂಟರ್ ಮತ್ತು ಸ್ಕ್ಯಾನರ್‌ನೀಡುವಂತೆ ಸರ್ಕಾರಕ್ಕೆ ಮನವಿಯ ಮೂಲಕ ಕೋರಿದ್ದೇವೆ ಎಂದು ವಿ.ಎ. ಸಂದೀಪ ಹೇಳಿದರು. 

ಸೇವಾ ವಿಷಯಗಳಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಕಲ್ಪಿಸುವಂತೆ, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವ ಬಗ್ಗೆ, ಕೆ.ಸಿ.ಎಸ್‌.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡಬೇಕು.ಕರ್ನಾಟಕ ಉಚ್ಛನ್ಯಾಯಾಲಯದ ಅಂತಿಮ ತೀರ​‍್ಿಗೆ ಒಳಪಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ.ಸ, ರಾ.ನಿ ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ ನೀಡಲು ಕ್ರಮವಹಿಸುವಂತೆ ಧರಣಿ ನಿರತರುಒತ್ತಾಯಿಸಿದರು. 

ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು. ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್‌.ಆರ್ ನಿಯಮ 16ಎ ರ ಉಪಖಂಡ(2)ನ್ನು ಮರುಸ್ಥಾಪಿಸುವ, ಕೆಲವು ವಿಶೇಷ ಚೇತನ, ತೀವ್ರ ಅನಿವಾರ್ಯ ಹಾಗೂ ಆರೋಗ್ಯದ ಸಮಸ್ಯೆ ಇರುವ ಪ್ರಕರಣಗಳ ನಿಯೋಜನೆಗಳನ್ನು ಕೌನ್ಸಿಲಿಂಗ್ ಮೂಲಕ ನಿಯೋಜನೆ ಆದೇಶಗಳನ್ನು ಮಾಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ.ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮುಂದುವರಿಸಲಾಗುವುದುಎಂದು ಮುಷ್ಕರ ನಿರತರು ಹೇಳಿದರು.  

ಪದಾಧಿಕಾರಿಗಳಾದಸಂದೀಪ, ಕೊಟ್ರೇಶ್ ಸೇರಿದಂತೆ 300 ಜನ ಗ್ರಾಮ ಆಡಳಿತಾಧಿಕಾರಿಗಳು ಧರಣಿಯಲ್ಲಿದ್ದರು.