ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿ ಮರು ಜಾರಿ ಅಸಾಧ್ಯ: ಗೃಹ ಸಚಿವ ಅಮಿತ್ ಶಾ

ಧುಲೆ 13: ಇಂದಿರಾ ಗಾಂಧಿ ಮರಳಿ ಬಂದರೂ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ಮರು ಜಾರಿಯಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದ್ದಾರೆ.

ಬುಧವಾರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿ ಮರು ಜಾರಿ ಅಸಾಧ್ಯ ಎಂದು ಹೇಳಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ರಾಹುಲ್ ಬಾಬಾ, ನೀವು ಮಾತ್ರವಲ್ಲ, ನಿಮ್ಮ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದು ಶಾ ಹೇಳಿದರು.