ಪ್ರತಿಯೊಬ್ಬ ಕನ್ನಡಿಗ ಕನ್ನಡ ಭಾಷೆಯನ್ನು ಮಾತನಾಡಿ ಉಳಿಸಿ ಬೆಳೆಸಬೇಕು; ಕನ್ನಡ ಶಾಲೆಗಳು ಕಡ್ಡಾಯವಾಗಿ ಉಳಿಯಬೇಕು- ಜಿ.ಎಂ ಓಂಕಾರಣ್ಣನವರ
Every Kannadigas should speak and preserve the Kannada language; Kannada schools should remain manda
ಲೋಕದರ್ಶನ ವರದಿ
ಹಾವೇರಿ 25: ಕನ್ನಡ ನಮ್ಮ ಮಾತೃ ಭಾಷೆ. ಕನ್ನಡವನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕೆಲಸ ಹಾವೇರಿ ಜಿಲ್ಲೆಯಿಂದಲೇ ಆರಂಭಗೊಳ್ಳಬೇಕಿದೆ.ನಾವೆಲ್ಲರೂ ಒಗ್ಗಟ್ಟಾಗಿ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡುವುದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಇಲ್ಲಿನಡಾ.ಬಿ.ಆರ್‌ಅಂಬೇಡ್ಕರ್ ಭವನದಲ್ಲಿ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ)ರಾಜ್ಯ ಸಮಿತಿಯಿಂದ ಹಿರಿಯ ಸಾಹಿತಿ ದಿ.ಗಂಗಾಧರ ನಂದಿ ಪ್ರಧಾನ ವೇದಿಕೆಯಲ್ಲಿ ಆಯೋಜಿಸಿದಎರಡನೇರಾಜ್ಯ ಮಟ್ಟದಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡವನ್ನು ಆಡಳಿತ ಭಾಷೆಯಾಗಿ ಹಾಗೂ ಭಾರತದ ಶಾಸ್ತ್ರೀಯ ಭಾಷೆಯಾಗಿಗುರುತಿಸಲಾಗಿದೆ. ಕನ್ನಡಕ್ಕಾಗಿ ಎಷ್ಟೋ ಜನ ಮಹನೀಯರು ತಮ್ಮ ಜೀವವನ್ನೇ ಕೊಟ್ಟಿದ್ದಾರೆ.ನಮಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನವಿಲ್ಲ.ಬೆಂಗಳೂರಿನಲ್ಲಿ ಶೇ.23ರಷ್ಟು ಮಾತ್ರ ಕನ್ನಡ ಭಾಷೆ ಮಾತನಾಡುವ ಜನರು ಇದ್ದಾರೆ.ವಿಧಾನ ಪರಿಷತ್ ಕಚೇರಿಯಲ್ಲಿರುವ ಎಲ್ಲರೂ ಸರಕಾರಿ ಅವಯಲ್ಲಿಕನ್ನಡವನ್ನೇ ಮಾತನಾಡಬೇಕು ಎಂದು ಆದೇಶಿಸಲಾಗಿದೆ. ಕನ್ನಡ ಶಾಲೆ ಬಂದ್ ಮಾಡುವ ಕೆಲಸಕ್ಕೆ ಯಾರೇ ಮುಂದಾದರೂ ಸಹಿಸಬಾರದು. ಕನ್ನಡಪರ ಸಂಘಟನೆಗಳು, ಕರುನಾಡ ಕನ್ನಡ ಸಾಹಿತ್ಯ ಸಂಘಟನೆಯು ವಿರೋಧಿಸಿ ಕೋರ್ಟ್‌ಗೆಕೇಸ್ ಹಾಕಿಸಬೇಕು.ನಿಮ್ಮ ಜೊತೆಗೆ ನಾವು ಇರುತ್ತೇನೆಎಂದರು.
ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಜಿ.ಎಂಓಂಕಾರಣ್ಣನವರ ಮಾತನಾಡಿ ರಾಜ್ಯ ಹಾಗೂ ಜಿಲ್ಲೆಯಲ್ಲಿರುವ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಕಲಿಯಬೇಕು. ಮನೆಯಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಹೆಚ್ಚು ಬಳಸಿ, ಮಾತನಾಡಿ ಉಳಿಸಿ ಬೆಳೆಸಬೇಕು.ಕನ್ನಡ ಶಾಲೆಗಳು ಕಡ್ಡಾಯವಾಗಿ ಉಳಿಯಬೇಕು. ಜಿಲ್ಲೆಯಲ್ಲಿ ಅನೇಕ ಸಾಹಿತಿಗಳು ಇದ್ದು, ಜಿಲ್ಲೆ ಸಮೃದ್ಧಿ ಸಾಹಿತಿಕ ಕ್ಷೇತ್ರವಾಗಿದೆ. ಕನ್ನಡ ಭಾಷೆ,ನೆಲ,ಜಲ ಉಳಿಸುವ ಕಾರ್ಯ ಮಾಡಬೇಕಿದೆ. ಸಮಾಜದ ಹಿತಕಾಯುವ ನಾಲ್ಕನೇ ಅಂಗವಾಗಿರುವ ಮಾಧ್ಯಮರಂಗ ಬಲಿಷ್ಠವಾಗಿ ಇನ್ನೂ ಬೆಳೆಯಬೇಕು. ಇಂತಹ ನಾಡಿನಲ್ಲಿ ಹುಟ್ಟಿದ್ದು ನನ್ನ ಪುಣ್ಯ.ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿರುವುದು ನನ್ನ ಸುಧೈವ. ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗಕ್ಕೆ ಕೃತಜ್ಞತೆ ತಿಳಿಸುತ್ತೇನೆ. ಸಮ್ಮೇಳನ ಯಸಸ್ವಿಗೊಳಿಸಲು ಸಹಕಾರ ನೀಡಿದ ಸರ್ವರಿಗೂ ಧನ್ಯವಾದಗಳನ್ನು ತಿಳಿಸಿದ ಸರ್ವಾಧ್ಯಕ್ಷರಾದ ಜಿ.ಎಂಓಂಕಾರಣ್ಣನವರ ಅವರು ಮನಃ ತುಂಬಿ ಭಾವನಾತ್ಮಕವಾಗಿ ಕನ್ನಡ ಮಾತೆಯ ಬಗ್ಗೆ ಮಾತನಾಡಿದರು.
ಕರುನಾಡ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗ ಸಂಸ್ಥಾಪಕ ಅಧ್ಯಕ್ಷರಾದ ಎಸ್.ಡಿ ಮುಡೆಣ್ಣವರ ಮಾತನಾಡಿ ಸರಕಾರಿ, ಅನುದಾನಿತ, ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳು ರಾಜ್ಯದಲ್ಲಿ ಉಳಿಯಲೆಬೇಕು. ಕನ್ನಡ ಶಾಲೆಗಳು ಮುಚ್ಚಲು ಬಿಡಬಾರದು. ಪ್ರತಿಯೊಬ್ಬರ ಮನೆ ಮನಗಳಲ್ಲಿ ಕನ್ನಡದ ದೀಪ ಹಚ್ಚಬೇಕು. ಕನ್ನಡವೇ ಉಸಿರು, ಕನ್ನಡವೇ ಹಸಿರಾಗಬೇಕು. ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಬಳಗದ ಎಲ್ಲ ಸದಸ್ಯರಿಗೂ ಅಭಿನಂದನೆ ತಿಳಿಸುವೆ ಎಂದರು. ಜಿಪಂ ಮಾಜಿ ಅಧ್ಯಕ್ಷರಾದ ಪರಮೇಶ್ವರ್ಪ ಮೇಗಳಮನಿ ಮಾತನಾಡಿ ಕನ್ನಡ ಭಾಷೆಗೆ ಗೌರವ ಕೊಡಬೇಕು. ಕನ್ನಡವೇ ನಮ್ಮ ಹೃದಯ. ಕನ್ನಡ ಭಾಷೆ ಮತ್ತು ಭಾರತೀಯ ಸಂಸ್ಕೃತಿ ಉಳಿಸಬೇಕು. ತಾಯಂದಿರು ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಅಭಿಮಾನ ಮೂಡಿಸಬೇಕು ಎಂದರು.
ಸರ್ವಾಧ್ಯಕ್ಷರ ಮೆರವಣಿಗೆ:ಸಮ್ಮೇಳನ ಉದ್ಘಾಟನೆಗೂ ಮುನ್ನ ನಗರದ ವಾಲ್ಮೀಕಿ ವೃತ್ತದಿಂದ ಡಾ. ಬಿ ಆರ್‌ಅಂಬೇಡ್ಕರ ಭವನದವರೆಗೆ ಸಮ್ಮೇಳನಾಧ್ಯಕ್ಷರನ್ನು ಸಾರೋಟಿನಲ್ಲಿ ಮೆರವಣಿಗೆ ನಡೆಸಲಾಯಿತು. ಡಿಎಸ್‌ಎಸ್‌ರಾಜ್ಯ ಸಂಚಾಲಕ ಎಸ್.ಫಕ್ಕೀರ್ಪ ಚಾಲನೆ ನೀಡಿದರು.ವಿ.ಎಸ್ ಪಾಟೀಲ, ಸತೀಶ ಕುಲಕರ್ಣಿ, ವಿರೂಪಾಕ್ಷಪ್ಪ ಕೊರಗಲ್ಲ ಇದ್ದರು. ಈ ವೇಳೆ ವಿವಿಧ ಕಲಾ ತಂಡಗಳು ಗಮನ ಸೆಳೆದವು. ಸಮಾರಂಭದಲ್ಲಿ ವಿವಿಧ ಸಾಹಿತಿಗಳ ಪುಸ್ತಕಗಳನ್ನು ಲೋಕಾರೆ್ಣ ಮಾಡಲಾಯಿತು. ಕವಿಗೋಷ್ಠಿಗಳು, ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ,ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಗಣ್ಯರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 