ಪ್ರತಿ ಸೋಮವಾರ ತೆರಿಗೆ ಪಾವತಿ ದಿನ ಆಚರಣೆ: ಭೀಮಾಶಂಕರ ಕನ್ನೂರ
Every Monday is a tax payment day: Bhimashankar Kannur
ಇಂಡಿ 18: ಪ್ರತಿ ಗ್ರಾಮ ಮಟ್ಟದಲ್ಲಿ ಕರ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ಎಂದು ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಹೇಳಿದರು.
ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಜಾಥಾ, ಟಾಂ ಟಾಂ, ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಿ, ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಡಾ. ಭೀಮಾಶಂಕರ ಕನ್ನೂರ ಅವರು ಸೂಚನೆ ನೀಡಿದರು.
ತಾಲೂಕ ಪಂಚಾಯತ್ ಸಭಾ ಭವನದಲ್ಲಿ ಇಂದು ಗುರುವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಕರ ವಸೂಲಿಗಾರರ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಇಲ್ಲಿವರೆಗೂ ಶೇ. 11.75 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಗ್ರಾಮ ಪಂಚಾಯಿತಿವಾರು ಪ್ರಗತಿಗೆ ಹೋಲಿಸಿದಾಗ ಖೇಡಗಿ, ಹಡಲಸಂಗ, ಮೀರಗಿ, ಹಿರೇ ಬೇವನೂರ ಮತ್ತು ನಾದ ಕೇಡಿ ಪಂಚಾಯಿತಿಗಳಲ್ಲಿ ತುಂಬಾ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಆದ್ದರಿಂದ ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕ್ರಮಗಳ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಬೇಕು. ಹಾಗೆಯೇ ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ, ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡಲು ಸೂಚನೆ ನೀಡಿದ ಅವರು, ಇನ್ನೂ ಒಂದು ತಿಂಗಳೊಳಗೆ ಕಡ್ಡಾಯವಾಗಿ ಶೇ.100 ರಷ್ಟು ಕರವಸೂಲಾತಿಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಕರ ವಸೂಲಿ ಮಾಡಿದ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬಿಲ್ ಕಲೆಕ್ಟರ್‌ಗಳನ್ನು ತಾಲೂಕ ಪಂಚಾಯತನಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಕರ ವಸೂಲಾತಿಯಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಪಿಡಿಒ ಹಾಗೂ ಬಿಲ್ ಕಲೆಕ್ಟರ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು.
ಸಹಾಯಕ ನಿರ್ದೇಶಕರು (ಪಂ ರಾ) ಪ್ರಕಾಶ ರಾಠೋಡ ಮಾತನಾಡಿ, ಈ ಸಲ ತಾಲೂಕಿನ ಎಲ್ಲ ಗ್ರಾಪಂಗಳೂ ಪೂರ್ಣ ಪ್ರಮಾಣದ ಕರ ವಸೂಲಿಗೆ ಪ್ರಯತ್ನಿಸಿ ಗ್ರಾಪಂಗಳಲ್ಲಿ ಪ್ರತಿ ಸೋಮವಾರ ಆಯೋಜಿಸುವ ತೆರಿಗೆ ಸಂಗ್ರಹ ಅಭಿಯಾನದ ಯಶಸ್ಸಿಗೆ ಸಹಕರಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಯೋಜನಾಧಿಕಾರಿ ನಂದೀಪ ರಾಠೋಡ, ವ್ಯವಸ್ಥಾಪಕ ಮುರುಗೇಶ ನಾರಾಯಣಪುರ, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು , ಗ್ರೇಡ್ 1ಮತ್ತು 2 ಹಾಗೂ ಬಿಲ್‌ಕಲೇಕ್ಟರಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 