ಪ್ರತಿಯೊಬ್ಬ ಪ್ರಜೆ ಕಾನೂನಿನ ಅರಿವು ಹೊಂದಿರಬೇಕು: ಪಿಎಸ್‌ಐ ಮಧು ಎಲ್.
Every citizen should be aware of law: PSI Madhu L.
ಮಹಾಲಿಂಗಪುರ 07: ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಕೂಡ ಕಾನೂನಿನ ಅರಿವು ಹೊಂದಿರಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟನ್ನು ಧರಿಸಬೇಕು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸಬಾರದು, ಅಭ್ಯಾಸದ ಕಡೆಗೆ ಕಾಳಜಿ ವಹಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್‌ಐ ಮಧು ಎಲ್ ಹೇಳಿದರು.
ಸ್ಥಳೀಯ ಅಕ್ಷರ ಪಿಯು ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಥಮ ವರ್ಷದ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ನಂತರ ಮುಖ್ಯ ಅತಿಥಿಯಾದ ಪತ್ರಕರ್ತ ಜಯರಾಮ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಸಂಸ್ಕಾರವಿದ್ದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಈ ಶಿಕ್ಷಣ ಸಂಸ್ಥೆಯು ಅತ್ಯುತ್ತಮ ಬೋಧನಾ ಕೌಶಲ್ಯಗಳನ್ನು ಹೊಂದಿದೆ ಎಲ್ಲರೂ ಇದರ ಉಪಯೋಗ ತೆಗೆದುಕೊಳ್ಳಬೇಕು ಎಂದರು.
ಇನ್ನೊರ್ವ ಮುಖ್ಯ ಅತಿಥಿಯಾದ ಎಂ.ಕೆ ಕುಲಗೋಡ ಮಾತನಾಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ದೃಢಸಂಕಲ್ಪವಿದ್ದರೆ ಜಗತ್ತನ್ನೇ ಗೆಲ್ಲುವ ಸಾಮರ್ಥ್ಯ ಹೊಂದುವರು ಎಂದರು.
ಕಾಲೇಜಿನ ಪ್ರಾಚಾರ್ಯ ಪ್ರವೀಣ ಕುಲಗೋಡ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬರುವ ಕಷ್ಟಗಳಿಗೆ ಹೆದರದೆ ಮುನ್ನುಗ್ಗಿ ಸಾಧನೆ ಮಾಡಬೇಕು ಎಂದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ! ವಿನೋದ್ ಮೇತ್ರಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ಧರೆಪ್ಪ ಬ್ಯಾಕೋಡ,ಪ್ರಕಾಶ ಸರ,ಎಸ್ ಕೆ ಗಿಂಡೆ ಅತಿಥಿಗಳಾಗಿ ಭಾಗವಹಿಸಿದ್ದರು.
ಅಮರನಾಥ ರಾವಳ ಹಾಗೂ ಬೋಧಕ ಸಿಬ್ಬಂದಿಯವರು ಹಾಜರಿದ್ದರು. ಪ್ರಿಯಾ ಹಡಪದ ಭರತ ನಾಟ್ಯ ಪ್ರದರ್ಶಿಸಿದರು. ಸುಮಲತಾ ಕಲ್ಲೂರ ಹಾಗೂ ಅಂಕಿತಾ ರಾಥೋಡ ನಿರೂಪಿಸಿದರು,ಕಾಶವ್ವ ಬ್ಯಾಳಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 