ಪಟ್ಟಣದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಶಬ್ಬೀರ ಹೆಚ್
Everyone's cooperation is necessary for the development of the town: Shabbir H
ಕಂಪ್ಲಿ:19. ಕಂಪ್ಲಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪುರಸಭೆ ಆಡಳಿತ ಮಂಡಳಿಯವರ ಹಾಗೂ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಮುಖಂಡ ಶಬ್ಬೀರ್ ಹೆಚ್ ಹೇಳಿದರು.ಅವರು ಗುರುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ನಡುವಲ ಮಸೀದಿಯಿಂದ ಜೋಗಿ ಕಾಲುವೆರೆಗೂ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ರಸ್ತೆಗಳ ಅಭಿವೃದ್ಧಿ ಜತೆಗೆ ಪಟ್ಟಣವು ಸುಂದರವಾಗಿ ಕಾಣಲು ಸಾಧ್ಯವಾಗುತ್ತದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಅವಶ್ಯಕತೆ ಇದ್ದು, ಪುರಸಭೆ ಆಡಳಿತವು ಅಭಿವೃದ್ಧಿ ಮಾಡುವ ಭರವಸೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಪಟ್ಟಣದ ಅಭಿವೃದ್ಧಿ ಸಹಕಾರ ನೀಡಬೇಕಾಗಿದೆ. ಕೊಟ್ಟಾಲ್ ರಸ್ತೆ ಅಭಿವೃದ್ಧಿ ಪಡಿಸಿದಂತೆ, ಪುರಸಭೆ ವ್ಯಾಪ್ತಿಯ ಶಿಬಿರದಿನ್ನಿ(ಮಾರುತಿನಗರ)ವರೆಗೆ ಡಬಲ್ ರಸ್ತೆ ಮಾಡುವ ಮೂಲಕ ಅಭಿವೃದ್ಧಿ ಪಡಿಸಬೇಕೆಂದು ಮನವಿ ಮಾಡಿದರು.
ನಂತರ ಪ್ರಭಾರಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯ ಸಿ.ಆರ್.ಹನುಮಂತ, ಖಾದಾರಬಾಷಾ, ಸುಧಾಕರ ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 