ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ: ಸತೀಶ್ ಸೈಲ್
Everyone's cooperation is necessary to build a polio-free society: Satish Sail
ಕಾರವಾರ 28: ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಷಕರು ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು ಎಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು.
ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕ್ರಿಮ್ಸ್‌ನಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ಪೋಲಿಯೋ ಲಸಿಕೆ ಪಡೆದಿದ್ದ ಮಕ್ಕಳಿಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ದಿನ ಮತ್ತೊಮ್ಮೆ ಲಸಿಕೆ ನೀಡುವುದು ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಾಗಿದೆ. ಜಿಲ್ಲೆಯ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 0 ರಿಂದ 5 ವರ್ಷದೊಳಗಿನ 89,388 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 873 ಪೋಲಿಯೋ ಬೂತ್‌ಗಳು, 31 ಟ್ರಾನ್ಸಿಟ್ ತಂಡಗಳು ಹಾಗೂ 9 ಮೊಬೈಲ್ ತಂಡಗಳನ್ನು ರಚಿಸಲಾಗಿದ್ದು, 3,596 ಸಿಬ್ಬಂದಿ ಮತ್ತು 184 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಷ್ ಶಶಿ, ಕ್ರಿಮ್ಸ್ ಡೀನ್ ಡಾ. ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರರಾವ್, ಜಿಲ್ಲಾ ಸರ್ಜನ್ ಡಾ. ಗಣೇಶ್, ಆರಿ್ಸಎಚ್ ಅಧಿಕಾರಿ ಡಾ. ನಟರಾಜ್, ವೈದ್ಯಕೀಯ ಅಧೀಕ್ಷಕ ಡಾ. ಪಾಸ್ಕರ್, ಡಾ. ಹೇಮಗಿರಿ, ಡಾ. ವಿಜಯರಾಜ್, ಕ್ಯಾ. ಡಾ. ರಮೇಶ್ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 