ಅಭಿವೃದ್ಧಿಗೆ ಎಲ್ಲರ ಸಲಹೆ, ಸಹಕಾರ ಅಗತ್ಯ: ಲಮಾಣಿ
Everyone's suggestions and cooperation are essential for development: Lamani
ಅಭಿವೃದ್ಧಿಗೆ ಎಲ್ಲರ ಸಲಹೆ, ಸಹಕಾರ ಅಗತ್ಯ: ಲಮಾಣಿ
ಹಾವೇರಿ 12: ಕ್ಷೇತ್ರದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಎಲ್ಲರ ಸಲಹೆ, ಸಹಕಾರ ಪಡೆದು ಮುನ್ನಡೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು.
ಸವಣೂರ ತಾಲೂಕಿನ ಹತ್ತಿಮತ್ತೂರ ಗ್ರಾಮದ ಶ್ರೀ ವಿರಕ್ತಮಠದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶ್ರೀ ಭರಮಲಿಂಗೇಶ್ವರ ದೇವಸ್ಥಾನ ಲೋಕಾರೆ್ಣ ಹಾಗೂ ಕೆರೆಗೆ ಬಾಗಿನ ಅರ್ಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀಗಳ ಹಾಗೂ ಜನರ ಆಶೀರ್ವಾದದಿಂದ ಸಚಿವರಾಗಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಗುರಿ ಹೊಂದಿದ್ದು, ಎಲ್ಲರ ಸಲಹೆ-ಸೂಚನೆಗಳನ್ನು ಪರಿಗಣಿಸಿ ಪ್ರಗತಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ಧಾರ್ಮಿಕ ಕಾರ್ಯದ ಜೊತೆಗೆ ಈ ಭಾಗದ ಬಹುದಿನಗಳ ಬೇಡಿಕೆಯಾದ ಕೆರೆ ತುಂಬಿಸುವ ಕಾರ್ಯ ಕೈಗೊಂಡಿರುವುದು ಹೆಮ್ಮೆಯ ಸಂಗತಿ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯದ ಶ್ರದ್ಧಾ ಕೇಂದ್ರಗಳಿಗೆ ಉಚಿತವಾಗಿ ಭೇಟಿ ನೀಡುವ ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ ?2,500 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ ಎಂದರು.
ನೂತನ ಸವಣೂರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹನುಮಂತಗೌಡ ಉಳ್ಳಾಗಡ್ಡಿ ಮಾತನಾಡಿ, ಜನರ ಸೇವೆ ಮಾಡಲು ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹತ್ತಿಮತ್ತೂರ ವಿರಕ್ತಮಠದ ಶ್ರೀ ನಿಜಗುಣ ಶಿವಯೋಗಿಗಳು ಹಾಗೂ ಸವಣೂರಿನ ದೊಡ್ಡಹುಣಸೆಮಠದ ಶ್ರೀ ಚನ್ನಬಸವ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಚಿವ ರುದ್ರ್ಪ ಲಮಾಣಿ, ನೂತನ ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು.
ಮುಖಂಡರಾದ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ. ಮೈದೂರ, ಪ್ರಭುಗೌಡ ಬಿಷ್ಟನಗೌಡ್ರ, ಆನಂದಪ್ಪ ಅಕ್ಕೂರ, ಎಸ್.ವಿ. ಪಾಟೀಲ, ಶ್ರೀಧರ ದೊಡ್ಡಮನಿ, ತಹಶೀಲ್ದಾರ್ ರವಿಕುಮಾರ ಕೊರವರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ಪಿ. ಶಿಡೇನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 