ಪ್ರತಿಯೊಬ್ಬರಲ್ಲೂ ಪ್ರತಿಭೆ ಅಡಗಿದೆ: ಡಾ. ಸಂತೋಷ ಜಯಗೌಡರ
Everyone has hidden talent: Dr. Santosh Jayagowda
ಬೆಳಗಾವಿ 26: ಪ್ರಕೃತಿಯಲ್ಲಿ ಜನ್ಮ ತಾಳಿದ ಪ್ರತಿಯೊಬ್ಬರಲ್ಲೂ ಪ್ರತಿಭೆ ಆಡಗಿದ್ದು ಆ ಪ್ರತಿಭೆಯನ್ನು ಗುರುತಿಸಿ ಹೊರ ತರುವ ವೇದಿಕೆ ನಿರ್ಮಾಣ ಮಾಡುವಲ್ಲಿ ಪಾಲಕರು, ಶಿಕ್ಷಕರು ಹಾಗೂ ಸಮಾಜ ಪ್ರಯತ್ನಿಸಬೇಕೆಂದು ಜಿಎಸ್‌ಎಸ್ ಸ್ನಾತಕೋತ್ತರ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂತೋಷ ಜಯಗೌಡರ ಅಭಿಪ್ರಾಯಪಟ್ಟರು.
ಅವರು ಇಂದು ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ. ಸಂಬರಗಿಮಠ ಸಭಾಗ್ರಹದಲ್ಲಿ ಸಿದ್ಧರಾಮೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕೆಯೆಂಬುದು ಕೇವಲ ಅಂಕ ಆಧಾರಿತವಾಗದೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಬೇಕು. ಸಾವಿರ ಬಾರಿ ಪ್ರಯೋಗದಲ್ಲಿ ವಿಫಲನಾದರೂ ಧೃತಿಗೆಡದೆ ಶ್ರೇಷ್ಠ ಸಾಧನೆ ಮಾಡಿದ ಥಾಮಸ್ ಅಲ್ವಾ ಎಡಿಸನ್ ವಿಜ್ಞಾನಿಯಂತೆ ಸೋಲು, ಗೆಲುವುಗಳು ಮನುಷ್ಯನ ಆ ಸಮಯದ ಪ್ರಯತ್ನವನ್ನು ಪ್ರತಿನಿಧಿಸಬಲ್ಲವೇ ಹೊರತು ಆತನ ನಿಜವಾದ ಸಾಮರ್ಥ್ಯವನ್ನಲ್ಲ ಎಂದರು.
ಇನ್ನೋರ್ವ ಅತಿಥಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಅಶೋಕ ಹುಲಗಬಾಳಿ ಮಾತನಾಡಿ ವಿದ್ಯಾರ್ಥಿಗಳು ಪರೀಕ್ಷೆಗೆ ಭಯಪಡದೇ ಅದನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಬೇಕು. ಕೇವಲ ಪಠ್ಯಗಳಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ರಾಗಿರಬೇಕು. ಸಾಮಾಜಿಕ ಕಳಕಳಿ, ಪರಿಸರ ಪ್ರಜ್ಞೆ, ಪರೋಪಕಾರ, ದೇಶಪ್ರೇಮ ಮುಂತಾದ ಶ್ರೇಷ್ಠ ಮಾನವೀಯ ಗುಣಗಳನ್ನು ಬಾಲ್ಯದಲ್ಲೇ ಅಳವಡಿಸಿಕೊಳ್ಳಬೇಕು ಎಂದರು. ವೇದಿಕೆಯ ಮೇಲೆ ಶಾಲೆಯ ಪ್ರಾಚಾರ್ಯೆ ಪೂಜಾ ನಾಯಕ, ಸಂಯೋಜಕ ರಾಜಶೇಖರ ಪಾಟೀಲ ಉಪಸ್ಥಿತರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 