ತಹಶೀಲ್ದಾರ ಪಾಲನಾ ವರದಿ ಸಲ್ಲಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು
Everyone must be at their duty station for the next 3 days.
ಗ್ರಾಮ ಆಡಳಿತ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲು, ಗ್ರಾಮಗಳಲ್ಲಿ ಕಚೇರಿಗೆ ಸ್ಥಳ ಗೊತ್ತುಪಡಿಸಿ ಆದೇಶ; ಮುಂದಿನ 3 ದಿನದಲ್ಲಿ ಎಲ್ಲರೂ ಕರ್ತವ್ಯ ಸ್ಥಳದಲ್ಲಿರಬೇಕು;
ಧಾರವಾಡ 1: ಆಡಳಿತ ವ್ಯವಸ್ಥೆಯ ಮೂಲ ಗ್ರಾಮಗಳು ಆಗಿರುವದರಿಂದ ಗ್ರಾಮ ಆಡಳಿತ ಸಶಸ್ತಿಕರಣ ಮಾಡಿ, ಅರ್ಹ ಫಲಾನುಭವಿಗಳಿಗೆ ಸರಕಾರದ ಪ್ರತಿ ಯೋಜನೆ ತಲುಪುವಂತೆ ಮಾಡುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ. ಪ್ರತಿ ಗ್ರಾಮ ಆಡಳಿತ ಅಧಿಕಾರಿ ತಮ್ಮ ಸಾಜಾದ ಕೇಂದ್ರಗ್ರಾಮದಲ್ಲಿದ್ದು, ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಕಚೇರಿ ಸ್ಥಳ ಗುರುತಿಸಿ, ಆದೇಶಿಸಲಾಗಿದೆ. ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಕಚೇರಿ ಅವಧಿಯಲ್ಲಿ ತಮಗೆ ಗೊತ್ತುಪಡಿಸಿದ ಗ್ರಾಮದ ಕಚೇರಿಯಲ್ಲಿ ಕಡ್ಡಾಯವಾಗಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.ಅವರು ಈ ಕುರಿತು ಇಂದು ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ, ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯವಿದ್ದು ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳು ಅವರುಗಳ ಕರ್ತವ್ಯ ನಿರ್ವಹಿಸುವ ಕಂದಾಯ ವೃತ್ತ, ಕೇಂದ್ರ ಸ್ಥಾನಗಳಲ್ಲಿ ವಾಸವಿರದೇ, ಸಾರ್ವಜನಿಕರಿಗೆ ಕಛೇರಿ ವೇಳೆಯಲ್ಲಿ ಲಭ್ಯವಾಗುತ್ತಿಲ್ಲ ಹಾಗೂ ಇದರಿಂದಾಗಿ ಸಾರ್ವಜನಿಕರು ಬಹಳ ತೊಂದರೆಯನ್ನು ಅನುಭವಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ.
ಈ ವಿಷಯನ್ನು ಗಂಭೀರವಾಗಿ ಪರಿಗಣಿಸಿ, ಗ್ರಾಮ ಆಡಳಿತ ಅಧಿಕಾರಿಗಳು ಕಡ್ಡಾಯವಾಗಿ ಕಛೇರಿ ಅವಧಿಯಲ್ಲಿ ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಸಾರ್ವಜನಿಕರಿಗೆ ಲಭ್ಯವಾಗಿ ಅವರ ಕೆಲಸ-ಕಾರ್ಯಗಳನ್ನು ನಿರ್ವಹಿಸುವಂತೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಕಛೇರಿ ವೇಳೆಯಲ್ಲಿ ಲಭ್ಯವಾಗದೇ ಕೆಲಸ-ಕಾರ್ಯಗಳಿಗೆ ತೊಂದರೆಯನ್ನುಂಟು ಮಾಡಿದವರ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ಕುರಿತು ಸರಕಾರಕ್ಕೆ ವರದಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ಇಲಾಖೆಯ ಎಲ್ಲ ಕಾರ್ಯಗಳನ್ನು ಬಹಿಷ್ಕರಿಸಿ, ಸರಕಾರಕ್ಕೆ ಸಲ್ಲಿಸಿದ ಮನವಿಯಲ್ಲಿನ ಅಂಶದಲ್ಲಿ ಮೂಲಭೂತ ಸೌಕರ್ಯದಲ್ಲಿ ಒಂದಾದ ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವ ವೃತ್ತ, ಸಾಜಾಗಳಲ್ಲಿ ಕಛೇರಿಗಳನ್ನು ಸ್ಥಾಪಿಸಲು ಮನವಿಯನ್ನು ಸಲ್ಲಿಸಿರುತ್ತಾರೆ.
ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಸಲ್ಲಿಸಿದ ಮನವಿಯನ್ನು ಗಂಭಿರವಾಗಿ ಪರಿಗಣಿಸಿರುವ, ಕಂದಾಯ ಸಚಿವರು ಕರ್ನಾಟಕ ಸರಕಾರ ಅವರ ಅಧ್ಯಕ್ಷತೆಯಲ್ಲಿ ಜೂನ್ 02, 2025 ರಂದು ಜರುಗಿದ ವಿಡಿಯೋ ಸಂವಾದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿ ಕಟ್ಟಡಗಳಲ್ಲಿ ಕಛೇರಿಗೆ ಸ್ಥಳಾವಕಾಶವನ್ನು ಕಲ್ಪಿಸುವ ಬಗ್ಗೆ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯನಿರ್ಹಹಿಸುತ್ತಿರುವ ವೃತ್ತ, ಸಾಜಾಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಚಾವಡಿ ಇಲ್ಲದ ಪಕ್ಷದಲ್ಲಿ ಅವರು ಕಾರ್ಯನಿರ್ವಹಿಸುತ್ತಿರುವ ಕಾರ್ಯವ್ಯಾಪ್ತಿ, ಸಮೀಪದ ಗ್ರಾಮ ಪಂಚಾಯತ ಕಟ್ಟಡಗಳಲ್ಲಿ ಕಛೇರಿಗಳನ್ನು ಸ್ಥಾಪಿಸಲು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿರುತ್ತಾರೆ.
ಅದರಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ ಅವರು ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವ ವೃತ್ತ, ಸಾಜಾಗಳಲ್ಲಿ ಕಛೇರಿಗಳನ್ನು ಸ್ಥಾಪಿಸಲು ಅವಕಾಶವಿದ್ದ ಬಗ್ಗೆ ಜಂಟಿಯಾಗಿ ನಿಗದಿತ ನಮೂನೆಯಲ್ಲಿ ವರದಿಗಳನ್ನು ಸಲ್ಲಿಸಿದ್ದಾರೆ ಎಂದು ಅವರು ಹೇಳಿರುತ್ತಾರೆ.
ಸದರಿ ವರದಿಗಳನ್ನು ಪರೀಶೀಲಿಸಿ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಅವರು ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸ್ಥಾನ, ವೃತ್ತಗಳ ಕಾರ್ಯವ್ಯಾಪ್ತಿಯ ಗ್ರಾಮ ಪಂಚಾಯತಿ, ಸಮೀಪದ ಗ್ರಾಮ ಪಂಚಾಯತಿಗಳ ಕಟ್ಟಡ, ಕಂದಾಯ ಇಲಾಖೆ ಗ್ರಾಮ ಚಾವಡಿಗಳಲ್ಲಿ ಕಛೇರಿಗಳನ್ನು ಸ್ಥಾಪಿಸುವಂತೆ ಆದೇಶಿಸಿದ್ದಾರೆ.ಜಿಲ್ಲೆಯ ಒಟ್ಟು 198 ಗ್ರಾಮ ಆಡಳಿತ ವೃತ್ತ, ಸಾಜಾಗಳಿಗೆ ಗ್ರಾಮ ಆಡಳಿತ ಕಛೇರಿಗಳನ್ನು ಸ್ಥಾಪಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಅದರಂತೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳು ಆದೇಶ ಹೊರಡಿಸಿದ 03 ದಿನದೊಳಗಾಗಿ ಕಛೇರಿಗಳನ್ನು ಸ್ಥಾಪಿಸಿ, ಕೇಂದ್ರಸ್ಥಾನದಲ್ಲಿ ಕಛೇರಿಯ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಇಲಾಖೆಯ ಹಾಗೂ ಸಾರ್ವಜನಿಕರ ಕೆಲಸ-ಕಾರ್ಯಗಳನ್ನು ಯಾವುದೇ ರೀತಿ ತೊಂದರೆಯಾಗದ ಹಾಗೆ ಕಾರ್ಯನಿರ್ವಹಿಸುವುದು. ಒಂದು ವೇಳೆ ಕಛೇರಿ ವೇಳೆಯಲ್ಲಿ ಗ್ರಾಮ ವೃತ್ತಗಳಲ್ಲಿ ಲಭ್ಯವಾಗದೆ ಸಾರ್ವಜನಿಕರಿಗೆ ಹಾಗೂ ಸರಕಾರಿ ಕೆಲಸಕ್ಕೆ ತೊಂದರೆಯುಂಟು ಮಾಡಿದ್ದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿಸಿದ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಗ್ರಾಮ ಆಡಳಿತ ವೃತ್ತ, ಸಾಜಾಗಳಲ್ಲಿ ಕಛೇರಿಯನ್ನು ಸ್ಥಾಪಿಸುವ ಬಗ್ಗೆ ಸಂಬಂಧಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ ಇವರೊಂದಿಗೆ ಸಮನ್ವಯ ಸಾಧಿಸಿ 07 ದಿನದೊಳಗಾಗಿ ಪಾಲನಾ ವರದಿಯನ್ನು ಸಲ್ಲಿಸಬೇಕು.ತಹಶಿಲ್ದಾರ ಕಚೇರಿಗಳಲ್ಲಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯ ನಾಮಫಲಕದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಾಜಾ ಹಾಗೂ ಕರ್ತವ್ಯ ನಿರ್ವಹಣೆಯ ಕೇಂದ್ರ ಸ್ಥಳಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 