ಬ್ಯಾಡಗಿ 11 : ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯನ್ನು ಎಲ್ಲರೂ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಕಾರ್ಯಕ್ರಮದಲ್ಲಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಶಿವಶರಣರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಸಿದ್ಧರಾಗಬೇಕು. ಪತಿ ಭಕ್ತಿಗೆ ಹೇಮರೆಡ್ಡಿ ಮಲ್ಲಮ್ಮ ಉತ್ತಮ ಉದಾಹರಣೆಯಾಗಿದ್ದಾಳೆ. ಜೀವನದಲ್ಲಿ ಹಲವು ಕಷ್ಟ ನಷ್ಟ ಅನುಭವಿಸಿದ ಮಲ್ಲಮ್ಮ ಇಂದಿನ ಪೀಳಿಗೆಗೆ ಆದರ್ಶವಾಗಿದ್ದಾಳೆ ಎಂದು ಹೇಳಿದರು.
ಈ ವೇಳೆ ಮುಖಂಡ ನಾಗರಾಜ ಆನ್ವೇರಿ.ಮುತ್ತಣ್ಣ ಶಿಗ್ಗಾಂವಿ.ಶಿರಸ್ತೆದಾರ ನಾಗರತ್ನ ಕಾಳೆ. ಸಮಾಜದವರಾದ ಪ್ರಕಾಶ್ ಅಜ್ಜಮ್ಮನವರ.ರಾಮಪ್ಪ ಅಡಗಂಟಿ.ಚನ್ನಬಸಪ್ಪ ಅಜ್ಜಮ್ಮನವರ .ಮಾದೇವಪ್ಪ ರೆಡ್ಡೆರ.ಹಾಗೂ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.