ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ: ಚೋಳನ್

ಧಾರವಾಡ 10: ಸುಮಾರು ಆರು ದಶಕಗಳ ನಂತರ ಧಾರವಾಡದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ವ್ಯಕ್ತಿ, ಸಂಘ, ಸಂಸ್ಥೆ ಸದಸ್ಯರು ಸ್ವಯಂ ಪ್ರೇರಣೆಯದ ಸಕ್ರಿಯವಾಗಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಂಘ, ಸಂಸ್ಥೆ, ಟ್ರಸ್ಟ್ ಪದಾಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು.

ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯಲ್ಲಿ ಹಬ್ಬವಾಗಿ ಆಚರಿಸುತ್ತಿದ್ದೇವೆ. ಸಮ್ಮೇಳನದಲ್ಲಿ ಭಾಗವಹಿಸುವಿಕೆಯಿಂದ ಯಾರೊಬ್ಬರು ಹೊರಗುಳಿಯಬಾರದು. ಪ್ರತಿಯೊಬ್ಬರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸ್ಮರಣೀಯಗೊಳಿಸಬೇಕು. ಜಿಲ್ಲೆಯ ಸಂಘ, ಸಂಸ್ಥೆ, ಟ್ರಸ್ಟ್ಗಳ ಪದಾಧಿಕಾರಿಗಳು ಸದಸ್ಯರು ತಮ್ಮನ್ನು ಈ ಸಮ್ಮೇಳನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.

ಸಮ್ಮೇಳನದ ಮೆರವಣಿಗೆ ರಸ್ತೆಯ ಎರಡು ಬದಿಯಲ್ಲಿ ಸ್ವಚ್ಛತೆ, ರಂಗೋಲಿ ಹಾಕುವುದು ಸೇರಿದಂತೆ ಕಟ್ಟಡಗಳ ಸೌಂದಯರ್ಿಕರಣಗೊಳಿಸಬೇಕು ಎಂದು ಅವರು ತಿಳಿಸಿದರು. ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಯೋಜಿಸಲು ತೀಮರ್ಾನಿಸಲಾಗಿದೆ. ಸಮ್ಮೇಳನ ನಡೆಯುವ ಸ್ಥಳ, ವೇದಿಕೆ ಮತ್ತು ಸುತ್ತ ಮುತ್ತಲಿನ ಪ್ರದೇಶವನ್ನು ಮಾತ್ರ ಪ್ಲಾಸ್ಟಿಕ್ ಮುಕ್ತವಾಗಿ ರೂಪುಗೊಳ್ಳಬೇಕಾದರೆ ಹೋಟೆಲ್, ಕಿರಾಣಿ ಅಂಗಡಿ ಸೇರಿದಂತೆ ಎಲ್ಲ ರೀತಿಯ ವ್ಯಾಪಾರಸ್ಥರು ಸಹಕರಿಸಿ, ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎಲ್.ಇ.ಎ ಸಂಸ್ಥೆಯ ಅಧ್ಯಕ್ಷ ಆರ್.ಯು. ಬೆಳ್ಳಕ್ಕಿ ಮಾತನಾಡಿ ಸಂಸ್ಥೆಯ ಶಾಲಾ, ಕಾಲೇಜು ಸಿಬ್ಬಂದಿ, ವಿದ್ಯಾಥರ್ಿಗಳನ್ನು ಸಮ್ಮೇಳನದಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಸಂಸ್ಥೆಯ ಆವರಣ. ಮೈದಾನಗಳನ್ನು ಪಾಕರ್ಿಂಗ್ ಇತರೆ ಕಾರ್ಯಕ್ಕೆ ಬಳಸಬಹುದು ಎಂದು ಹೇಳಿದರು.

ಹುಬ್ಬಳ್ಳಿ ಆಟೋ ಚಾಲಕರ ಸಂಘದ ಪದಾಧಿಕಾರಿ ಮಾತನಾಡಿ, ಸಮ್ಮೇಳನಕ್ಕೆ ಹೊರ ಜಿಲ್ಲೆ, ರಾಜ್ಯಗಳಿಂದ ಆಗಮಿಸುವ ಅತಿಥಿಗಳಿಗೆ ಹುಬ್ಬಳ್ಳಿ ರೈಲು ನಿಲ್ದಾಣದಿಂದ ಬಸ್ ನಿಲ್ದಾಣದವರೆಗೆ ಉಚಿತ ಆಟೋ ಸೇವೆ ನೀಡುವುದಾಗಿ ತಿಳಿಸಿದರು.

ಧಾರವಾಡ ಕಿರಾಣಿ ಮರ್ಚಂಟ್ಸ್ ಅಸೋಸಿಯೇಶನ್ ಪದಾಧಿಕಾರಿ ಮಾತನಾಡಿ ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ನಗರ ರೂಪಿಸಲು ಸಹಕರಿಸುವುದಾಗಿ ತಿಳಿಸಿದರು. ಮತ್ತು ಕಿರಾಣಿ ಅಂಗಡಿಗಳಿಗೆ ಬರುವ ಗ್ರಾಹಕರಿಗೆ ಸಾಹಿತ್ಯ ಸಮ್ಮೇಳನದ ಕರಪತ್ರ ನೀಡಿ, ಮಾಹಿತಿ ತಿಳಿಸುವುದಾಗಿ ಹೇಳಿದರು.

ಎಸ್ಡಿಎಂ, ಜೆ.ಎಸ್.ಎಸ್, ಅಂಜುಮನ್ ಇಸ್ಲಾಂ ಸಂಸ್ಥೆ, ಮುರಘಾಮಠ, ಸಿದ್ಧಾರೂಢಮಠ ಸೇರಿದಂತೆ ವಿವಿಧ ಸಂಘ, ಸಂಸ್ಥೆ ಟ್ರಸ್ಟ್ ಪದಾಧಿಕಾರಿಗಳು ಮಾತನಾಡಿ ಸಮ್ಮೇಳನ ಯಶಸ್ವಿಗೊಳಿಸಲು ತಮ್ಮದೆ ಆದ ಕೊಡುಗೆ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉವಿಭಾಗಾಧಿಕಾರಿ ಮಹ್ಮದ್ ಜುಬೇರ, ಅಬಕಾರಿ ಇಲಾಖೆ ಜಿಲ್ಲಾಧಿಕಾರಿ ಬಿ.ಆರ್. ಹಿರೇಮಠ, ಸಾರಿಗೆ ಅಧಿಕಾರಿ ರವೀಂದ್ರ ಕವಳಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಹುಬ್ಬಳ್ಳಿ ಸಿದ್ಧಾರೂಢ ಮಠದ ಟ್ರಸ್ಟಿ ಪ್ರಕಾಶ ಉಡಕೇರಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.